

ಬೆಂಗಳೂರು: ವಿಶೇಷ ಚೇತನರಿಗಾಗಿ ಸಲ್ಲಿಸಿದ ಸೇವೆಗಾಗಿ ಹಿರಿಯ ಪತ್ರಕರ್ತ ಜೆ ಪಿ ಗಡ್ಕರಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಪ್ರದಾನ ಮಾಡಿದರು.
ಪರಿವಾರ -ಕುಟುಂಬ-ರಾಷ್ಟ್ರೀಯ ಪೋಷಕರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ರಾಜಭವನದ ಬಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿದರು.
ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ವಿಶೇಷ ಚೇತನರ ಸಬಲೀಕರಣ ಮತ್ತು ಪುನರ್ವಸತಿಗಾಗಿ ತನ್ನ ಸಂಪೂರ್ಣ ಜೀವನವನ್ನು ಮುಡಿಪಾಗಿಟ್ಟ ವ್ಯಕ್ತಿಯನ್ನು ಗೌರವಿಸಿರುವುದು ಬಹಳ ಸಂತಸ ತಂದಿದೆ. 92ನೇ ವಯಸ್ಸಿನಲ್ಲೂ ಜೆ ಪಿ ಗಡ್ಕರಿ ಅವರು ವಿಶೇಷ ಚೇತನರ ಅಭಿವೃದ್ಧಿಗಾಗಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಪರಿವಾರ ಕುಟುಂಬ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಪಂಕಜ್ ಮಾರು ಸೇರಿದಂತೆ ಹಲವರು ಉಪಸ್ಥಿತರಿದ್ದರು.