36 ಸಾವಿರ ವಿದ್ಯಾರ್ಥಿಗಳಿಗೆ ಪೊಲೀಸರಿಂದ ಡ್ರಗ್ಸ್ ಕುರಿತ ಜಾಗೃತಿ

WhatsApp Image 2023-10-02 at 5.02.27 PM
Published on

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಯುವ ಸಮೂಹದಲ್ಲಿ ಮಾದಕ ದ್ರವ್ಯ ಕುರಿತು ಜಾಗೃತಿ ಮೂಡಿಸುವುದನ್ನು ನಗರ ಪೊಲೀಸರು ಮುಂದುವರಿಸಿದ್ದಾರೆ.

ಸೆಪ್ಟೆಂಬರ್‌ನಲ್ಲಿ 205ಕ್ಕೂ ಅಧಿಕ ಶಾಲಾ- ಕಾಲೇಜು ಹಾಗೂ 258 ವೃತ್ತಿಪರ ಶಿಕ್ಷಣ ಸಂಸ್ಥೆಗಳಿಗೆ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟು 36,024 ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ್ದಾರೆ. ಮಾದಕ ದ್ರವ್ಯ ಸೇವನೆಯಿಂದ ಆಗುವ ವೈಯಕ್ತಿಕ, ಕೌಟುಂಬಿಕ ಮತ್ತು ಸಮುದಾಯಿಕ ಹಾನಿಗಲ ಕುರಿತು ಜಾಗೃತಿ ಮೂಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಅಲ್ಲದೆ, ಮಾದಕ ದ್ರವ್ಯ ಕಳ್ಳ ಸಾಗಾಣಿಕೆ ಕುರಿತು ಮಾಹಿತಿ ಇದ್ದಲಿ ಅಥವಾ ಅಂತಹ ಚಟುವಟಿಕೆ ಕುರಿತು ಸುಳಿವು ನೀಡಿದರೇ ಕೂಡಲೇ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕ ಮಾಡುವಂತೆ ಸಲಹೆ ನೀಡಲಾಗಿದೆ.

ನಾರ್ಕೋಟೆಕ್ (ಎನ್‌ಡಿಪಿಎಸ್) ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ. ಜತೆಗೆ ಬಿಸಿಪಿ ಎನ್‌ಡಿಪಿಎಸ್ ಕಾರ್ಪೋಲ್ ಮತ್ತು ವೆಬ್‌ಸೈಟ್ ಲಿಂಕ್‌ಗಳನ್ನು ವಿದ್ಯಾರ್ಥಿಗಳಿಗೆ ಕೊಟ್ಟು ಪೊಲೀಸರೊಂದಿಗೆ ಸದಾ ಸಂಪರ್ಕದಲ್ಲಿ ಇರುವಂತೆ ವಿದ್ಯಾರ್ಥಿಗಳಿಗೆ ಪೊಲೀಸರು ಜಾಗೃತಿ ಮೂಡಿಸಿದ್ದಾರೆ ಎಂದು ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net