ಅಪರಾಧ ತಡೆಗಾಗಿ ಅರಿವು ಜಾಥಾ

HUN-DEC-14-3(AWARENESS JATHA)
Published on

ಹುಣಸೂರು: ಪೊಲೀಸ್ ಇಲಾಖೆ ಮತ್ತು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಸಹಯೋಗದಲ್ಲಿ ನಗರದಲ್ಲಿ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಅರಿವು ಜಾಥಾ ಏರ್ಪಡಿಸಲಾಗಿತ್ತು.


ಗುರುವಾರ ನಗರದ ಮುನೇಶ್ವರ ಕಾವಲ್ ಮೈದಾನದಿಂದ ಹೊರಟ ಅರಿವು ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ವಿದ್ಯಾರ್ಥಿಗಳು ಸಂಚಾರ ನಿಯಮ ಪಾಲಿಸಿ, ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ, ಮಾದಕ ವಸ್ತುಗಳಿಂದ ದೂರವಿರಿ ಮುಂತಾದ ಘೋಷಣೆಗಳನ್ನು ಕೂಗಿದರು.


ಅಡಿಷನಲ್ ಎಸ್ಪಿ ನಂದಿನಿ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಹಿತಮಿತವಾಗಿ ಬಳಸಿಕೊಳ್ಳುವ ಅಗತ್ಯವಿದೆ. ಇಲ್ಲಿ ನೀವು ಮಾಡುವ ಅಪರಾಧಗಳು ಸೈಬರ್ ಕ್ರೈಂ ಆಗಲಿವೆ, ಎಚ್ಚರ ವಹಿಸಿರಿ. ಮಾದಕ ವಸ್ತುಗಳ ವ್ಯಸನದಿಂದ ದೂರವಾಗಿರಿ. ಮೊಬೈಲ್‌ಗಳ ಬಳಕೆ ಅಗತ್ಯಕ್ಕಿಂತ ಹೆಚ್ಚಾದಲ್ಲಿ ನಿಮ್ಮ ಭವಿಷ್ಯವೇ ಹಾಳಾದೀತು. ಜಿಲ್ಲೆಯಲ್ಲಿ ಈ ಸಾಲಿನಲ್ಲಿ 480 ದ್ಚಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಅಪಘಾತಕ್ಕೊಳಗಾಗಿ ಜೀವ ಕಳೆದುಕೊಂಡಿದ್ದಾರೆ. ಸಂಚಾರ ನಿಯಮ ಪಾಲನೆ, ಹೆಲ್ಮೆಟ್ ಧಾರಣೆ ನಿಮ್ಮ ಜೀವ ಮತ್ತು ಜೀವನ ಉಳಿಸಿಕೊಳ್ಳಲು ಎನ್ನುವುದನ್ನು ಮರೆಯಬೇಡಿ. ನಿಮ್ಮ ಅಕ್ಕ ಪಕ್ಕ ಬಾಲ್ಯ ವಿವಾಹ ನಡೆಯುತ್ತಿದ್ದರೆ ದೂರವಾಣಿ ಸಂಖ್ಯೆ 112ಕ್ಕೆ ಫೋನಾಯಿಸಿ ಮಾಹಿತಿ ನೀಡಿ ಎಂದು ಕೋರಿದರು.


ಜಾಥಾದಲ್ಲಿ ಡಿವೈಎಸ್‌ಪಿ ಗೋಪಾಲಕೃಷ್ಣ, ಇನ್ಸ್‌ಪೆಕ್ಟರ್‌ಗಳಾದ ದೇವೇಂದ್ರಪ್ಪ, ಮುನಿಸ್ವಾಮಿ, ವಿವಿಧ ಕಾಲೇಜುಗಳ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net