

ಹುಣಸೂರು : ತಾಲೂಕಿನ ಹಿರೀಕ್ಯಾತನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ವಿಜಯಕುಮಾರ್, ಉಪಾಧ್ಯಕ್ಷರಾಗಿ ಕಮಲಮ್ಮ, ಅವಿರೋಧ ಆಯ್ಕೆಯಾದರು. ಸೋಮವಾರ ಸಂಘದ ಆವರಣದಲ್ಲಿ ಆಯೋಜಿಸಿದ್ದ ಚುನಾವಣೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿದ್ದ ಸಹಕಾರ ಇಲಾಖೆ ಹಿರಿಯ ನಿರೀಕ್ಷಕ ಸೈಯದ್ ಆಜ್ಮಾ ಘೋಷಿಸಿದರು.
ಈ ಸಂದರ್ಭ ಸಂಘದ ನಿರ್ದೇಶಕರಾದ ಪ್ರಕಾಶ್, ಕಾಂತರಾಜು, ಗೌರಜಶೆಟ್ಟಿ, ರಮೇಶ್, ಗಾಯತ್ರಿ, ರಮೇಶ್ ದೇವೇಗೌಡ, ರಾಜಮ್ಮ, ಮುಖ್ಯ ಕಾರ್ಯನಿರ್ವಣಾಧಿಕಾರಿ ಹರೀಶ್, ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.