ಅಯೋಧ್ಯೆಯಲ್ಲಿ ಇನ್ಮುಂದೆ ಮೊಬೈಲ್​ ಬಳಕೆ ನಿಷೇಧ; ಕಾರಣ ಹೀಗಿದೆ

Ayodhya
Published on

ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್​ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಶನಿವಾರ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಮಂಡಳಿಯು ಈ ಬಗ್ಗೆ ಆದೇಶ ಹೊರಡಿಸಿದೆ.

ಈ ಹಿಂದೆ ದೇವಸ್ಥಾನದೊಳಗೆ ಸಾರ್ವಜನಿಕರು ಮೊಬೈಲಗ್​ ಬಳಸುವುದಮನ್ನು ನಿಷೇಧಿಸಲಾಗಿತ್ತು. ಈಗ ವಿಐಪಿಗಳು ಮತ್ತು ವಿವಿಐಪಿಗಳು ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸಲಾಗಿದೆ.

ಈ ಕುರಿತು ಮಾತನಾಡಿರುವ ಟ್ರಸ್ಟಿ ಅನಿಲ್​ ಶರ್ಮಾ, ಭದ್ರತೆಯ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಐಜಿ ಹಾಗೂ ಕಮಿಷನರ್‌ ಜೊತೆಗಿನ ಸಭೆಯಲ್ಲಿ ಮೊಬೈಲ್‌ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಯಾರಿಗೂ ಯಾವುದೇ ಅನಾನುಕೂಲತೆ ಉಂಟಾಗದಂತೆ ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.

ರಾಮ ಮಂದಿರಕ್ಕೆ ಬರುವ ಭಕ್ತರ ಮೊಬೈಲ್‌ಗಳನ್ನು ಇಡಲು ಸೂಕ್ತ ವ್ಯವಸ್ಥೆ ಇದೆ. ಜನರು ತಮ್ಮ ಮೊಬೈಲ್ ಜೊತೆಗೆ ಇತರ ಬೆಲೆಬಾಳುವ ವಸ್ತುಗಳನ್ನು ಇಟ್ಟುಕೊಳ್ಳಬಹುದು. ಇಂತಹ ಪರಿಸ್ಥಿತಿಯಲ್ಲಿ ಜನರು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನದ ಆವರಣದಲ್ಲಿ ಸುವ್ಯವಸ್ಥೆ ಕಾಪಾಡಲು ಟ್ರಸ್ಟ್‌ಗೆ ಸಹಕರಿಸಬೇಕು. ಭಕ್ತರು ಲಾಕರ್ ಸೌಲಭ್ಯ ಪಡೆದು ತಮ್ಮ ಮೊಬೈಲ್ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಅದರಲ್ಲಿಟ್ಟು ದರ್ಶನ ಪಡೆಯಬಹುದಾಗಿದೆ ಎಂದು ಅನಿಲ್​ ಶರ್ಮಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net