

ಬೆಂಗಳೂರು: ಯಶಸ್ವಿನಿ ಯೋಜನೆಯ ಫಲಾನುಭವಿಗಳನ್ನು ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ (ಎಬಿಎಆರ್ಕೆ) ಯೋಜನೆಯಿಂದ ಹೊರಗಿಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸಹಕಾರ ಇಲಾಖೆಯಿಂದ ಯಶಸ್ವಿನಿ ಹಾಗೂ ಆರೋಗ್ಯ ಇಲಾಖೆಯಿಂದ ಎಬಿಎಆರ್ ಕೆ ಯೋಜನೆ ಅನುಷ್ಠಾನಗೊಳಿಸಲಾಗಿದೆ.
ಈ ಪೈಕಿ ಹೆಚ್ಚಿನ ಕುಟುಂಬಗಳು ಎರಡೂ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಎರಡೂ ಯೋಜನೆಗಳು ಪ್ರತಿ ಕುಟುಂಬಕ್ಕೆ ವಾರ್ಷಿಕ ತಲಾ 5 ಲಕ್ಷದವರೆಗೆ ಆರೋಗ್ಯ ಸೇವಾ ಸೌಲಭ್ಯ ಒದಗಿಸುತ್ತದೆ. ಆದ್ದರಿಂದ ಫಲಾನುಭವಿಗಳು ಯಾವುದಾದರೂ ಒಂದು ಯೋಜನೆಯಡಿ ಪ್ರಯೋಜನ ಪಡೆಯಬೇಕು ಎಂದು ತಿಳಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಸಾಸ್ಟ್) ಎರಡೂ ಯೋಜನೆಗಳನ್ನು ನಿರ್ವಹಣೆ ಮಾಡುತ್ತಿದೆ. ರಾಜ್ಯದಲ್ಲಿ 41.51 ಲಕ್ಷ ಮಂದಿ ಯಶಸ್ವಿನಿ ಫಲಾನುಭವಿಗಳಾಗಿದ್ದು, 41.09 ಲಕ್ಷ ಮಂದಿ ಆಧಾರ್ ಹೊಂದಿದ್ದಾರೆ. ಇವರಲ್ಲಿ 35.71 ಲಕ್ಷ ಮಂದಿ ಎರಡೂ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಕಳೆದ ವರ್ಷದಲ್ಲಿ 3.07 ಲಕ್ಷ ಯಶಸ್ವಿನಿ ಫಲಾನುಭವಿಗಳಿಗೆ ಎಬಿಎಆರ್ಕೆ ಅಡಿಯಲ್ಲಿ ಕೋಟಿ ಮೊತ್ತದ ಚಿಕಿತ್ಸೆ ಪಡೆದಿದ್ದಾರೆ.