ಬ್ರೇಕ್ ಫೇಲ್: ಅರಣ್ಯಕ್ಕೆ ನುಗ್ಗಿದ ಅಯ್ಯಪ್ಪ ಮಾಲಾಧಾರಿಗಳಿದ್ದ ಮಿನಿಬಸ್, ಮೂವರಿಗೆ ಗಂಭೀರ ಗಾಯ

accident 1
Published on

ಮಂಗಳೂರು: ಅಯ್ಯಪ್ಪ ಮಾಲಾಧಾರಿಗಳಿದ್ದ ಮಿನಿಬಸ್ ಬ್ರೇಕ್ ಫೇಲ್ ಆಗಿ ಅರಣ್ಯಕ್ಕೆ ನುಗ್ಗಿದ ಪರಿಣಾಮ 15 ಭಕ್ತರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ಶುಕ್ರವಾರ ಸಂಭವಿಸಿದೆ.

ಬಳ್ಳಾರಿಯ ಜಿಲ್ಲೆಯ ಕೂಡ್ಲೂಗಿ ತಾಲೂಕಿನ 21 ಜನರು ಮಿನಿ ಬಸ್​ನಲ್ಲಿ ಶಬರಿಮಲೆಗೆ ಪ್ರಯಾಣಿಸುತ್ತಿದ್ದರು. ಮಾರ್ಗದಲ್ಲಿ ಬ್ರೇಕ್​ ಫೇಲ್​ ಆಗಿ ಚಾಲಕನ ನಿಯಂತ್ರಣ ತಪ್ಪಿದ ಮಿನಿಬಸ್​ ಅರಣ್ಯಕ್ಕೆ ನುಗ್ಗಿದೆ. 15 ಭಕ್ತರು ಗಾಯಗೊಂಡಿದ್ದು, ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net