ಬಿ.ಪಿ.ಪರಮೇಶ್ವರಪ್ಪ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ

janapada
ಚಿಕ್ಕಮಗಳೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕನ್ನಡ ಶಕ್ತಿ ಕೇಂದ್ರದ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ ಉದ್ಘಾಟಿಸಿದರು. ಶ್ರೀನಿವಾಸ್, ಭಾಗ್ಯಾ, ಬಸಪ್ಪ, ಗುರುನಾಥಗೌಡ ಇತರರಿದ್ದರು.
Published on

ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿಷತ್‌ನ ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನ ಅಕ್ಟೆೋಬರ್ 8 ರಂದು ನಡೆಯಲಿದೆ. ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಕಲಾವಿದ ಬೆಳವಾಡಿಯ ಬಿ.ಪಿ.ಪರಮೇಶ್ವರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್‌ನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ತಿಳಿಸಿದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಮಟ್ಟದ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕಾರ ನೀಡಬೇಕು. ನಗರದ ಬೋಳರಾಮೇಶ್ವರ ದೇವಾಲಯದಿಂದ ವಿವಿಧ ಜಾನಪದ ಕಲಾತಂಡಗಳ ಸಮೇತ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಜಾನಪದ ಕಲಾವಿದರಿಗೆ ಜಾನಪದ ಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಉತ್ತರ ಕರ್ನಾಟಕದ ಜಾನಪದ ಕಲಾವಿದರ ತಂಡದಿಂದ ನೃತ್ಯ ಕಾರ್ಯಕ್ರಮ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾನಪದ ಗೀತೆಗಳ ಗಾಯನ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವುದು. ವಿವಿಧ ಗೋಷ್ಠಿಗಳನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲ ಶಾಸಕರನ್ನು, ರಾಜ್ಯದ ಹಿರಿಯ ಜಾನಪದ ಕಲಾವಿದರನ್ನು ಸಮ್ಮೇಳನಕ್ಕೆ ಆಹ್ವಾನಿಸಲು ತೀರ್ಮಾನಿಸಿದರು.
ಬೆಳವಾಡಿ ಗ್ರಾಪಂ ಅಧ್ಯಕ್ಷೆ ಭಾಗ್ಯಾ, ಜಿಲ್ಲಾ ಕನ್ನಡ ಶಕ್ತಿ ಕೇಂದ್ರದ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ, ಹಿರಿಯ ವೀರಗಾಸೆ ಕಲಾವಿದ ಡಾ.ಮಾಳೇನಹಳ್ಳಿ ಬಸಪ್ಪ, ದಾನಿ ಅತ್ತಿಕಟ್ಟೆ ಗುರುನಾಥ ಗೌಡ, ಪದಾಧಿಕಾರಿಗಳಾದ ಜ್ಯೋತಿ ವಿನೀತ್‌ಕುಮಾರ್, ಜಗದೀಶ್ವರಾಚಾರ್, ಕೌಸ್ತುಭಾಭಟ್, ತಮನ್ನಾ, ಸುಮಾ, ಬೆಳವಾಡಿ ಪರಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net