

ಬೆಂಗಳೂರು: ಬಿಜೆಪಿ ಪರ ನಟ ಸುದೀಪ್ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿರುವುದನ್ನು ಲೇವಡಿ ಮಾಡಿರುವ ಕಾಂಗ್ರೆಸ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ, ಕಾಂಗ್ರೆಸ್ನವರಿಗೆ ತಲೆಕೆಟ್ಟು ಏನು ಬೇಕಾದ್ರೂ ಮಾತಾಡ್ತಾರೆ. ಚಲನಚಿತ್ರದಲ್ಲಿ ಖ್ಯಾತಿ ಪಡೆದಿರುವ ವ್ಯಕ್ತಿ ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದ್ದಾರೆ. ನಾವು ಅದನ್ನು ಸ್ವಾಗತ ಮಾಡುತ್ತೇವೆ. ಬಿಜೆಪಿಯವರಿಗೆ ಸಿಕ್ಕಿರುವ ಬೆಂಬಲವನ್ನು ಕಾಂಗ್ರೆಸ್ನವರಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದರು.
ಇದೇ ಸಂದರ್ಭದಲ್ಲಿ ವಿ.ಸೋಮಣ್ಣ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಏನು ಹೇಳುತ್ತದೋ ಅದರಂತೆ ನಡೆಯುತ್ತದೆ ಎಂದು ಹೇಳಿದರು.
ಟಿಕೆಟ್ ಘೋಷಣೆ ಯಾವಾಗ ಎಂಬ ಪ್ರಶ್ನೆಗೆ ನಾಳೆ ಪಟ್ಟಿಯನ್ನು ಹೈಕಮಾಂಡ್ಗೆ ಕಳಿಸಿಕೊಡಲಾಗುತ್ತದೆ. ಫೈನಲ್ ಆದ ಬಳಿಕ ಘೋಷಣೆ ಮಾಡಲಾಗುತ್ತದೆ ಎಂದು ಬಿಎಸ್ವೈ ತಿಳಿಸಿದರು. (ದಿಗ್ವಿಜಯ ನ್ಯೂಸ್)