ಡಾ. ರಾಜ್​​ ಚಿತ್ರದಿಂದ ಆರಂಭವಾದ ಸರೋಜಾ ದೇವಿ ಸಿನಿ ಬದುಕು.. ಕನ್ನಡದಲ್ಲಿ ಅಪ್ಪು ಜತೆ ನಟಿಸಿದ್ದೇ ಕೊನೆ ! B Saroja Devi

b saroja devi
Published on

ಬೆಂಗಳೂರು : (B Saroja Devi )  ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು (ಜುಲೈ 14) ನಿಧನ ಹೊಂದಿದ್ದಾರೆ. ತಮಿಳು, ಕನ್ನಡ ಸೇರಿದಂತೆ ಹಲವುಭಾಷೆಯಲ್ಲಿ ನಟಿಸಿ ಸೈ ಎನಿಸಿಕೊಂಡ ಸರೋಜಾ ದೇವಿ ಅವರು ಇನ್ನಿಲ್ಲ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳಲ್ಲಿ ದುಖಃ ಮನೆ ಮಾಡಿದೆ.

ಸರೋಜಾದೇವಿಯವರು ಬೆಂಗಳೂರು, ಮೈಸೂರು ಸಾಮ್ರಾಜ್ಯ (ಈಗಿನ ಬೆಂಗಳೂರು, ಕರ್ನಾಟಕ)ದಲ್ಲಿ ೭ ಜನವರಿ ೧೯೩೮ ರಂದು ವೊಕ್ಕಲಿಗ ಕುಟುಂಬದಲ್ಲಿ ಜನಿಸಿದರು. ಸರೋಜಾದೇವಿ ಅವರಿಗೆ ಬಾಲ್ಯದಿಂದಲೇ ಲಲಿತಕಲೆಗಳ ಬಗ್ಗೆ ಆಸಕ್ತಿ ಇತ್ತು. ಅವರ ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ ಅವರು ಹೌಸ್​ವೈಫ್ ಆಗಿದ್ದರು. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು. ಅವಳು ೧೩ ನೇ ವಯಸ್ಸಿನಲ್ಲಿ ಒಂದು ಸಮಾರಂಭದಲ್ಲಿ ಹಾಡುತ್ತಿದ್ದಾಗ, ಅದನ್ನ ಕಂಡು ಬಿ.ಆರ್. ಕೃಷ್ಣಮೂರ್ತಿ‍ಯವರು ಚಿತ್ರದ ಪ್ರಸ್ತಾಪ ಮಾಡಿದಾಗ, ಅವಳು ಅದನ್ನು ನಿರಾಕರಿಸಿದರು. ನಂತರ ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.

1955ರಲ್ಲಿ ಬಂದ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ ಸರೋಜಾ ದೇವಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು. ಆ ಬಳಿಕ ಆಫರ್​ಗಳು ಅವರನ್ನು ಹುಡುಕಿ ಬಂದವು. ಮೇರು ನಟರಾದ ರಾಜ್​ಕುಮಾರ್, ಕಲ್ಯಾಣ್​ ಕುಮಾರ್ ಮೊದಲಾದವರ ಜೊತೆ ಸರೋಜಾ ದೇವಿ ತೆರೆ ಹಂಚಿಕೊಂಡರು. ‘ಅಮರ ಶಿಲ್ಪಿ ಜಕಣಾಚಾರಿ’, ‘ಮಲ್ಲಮ್ಮನ ಪವಾಡ’, ಭಾಗ್ಯವಂತರು, ‘ಬಬ್ರುವಾಹನ’ ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು.

ಕೇವಲ ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೋ ಸರೋಜಾ ದೇವಿ ಅವರು ನಟಿಸಿದ್ದಾರೆ. ಅವರ ವೃತ್ತಿ ಬದುಕಿನಲ್ಲಿ ಸುಮಾರು 200ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದರು.

ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಿ.ಸರೋಜಾದೇವಿ ದಕ್ಷಿಣ ಭಾರತದ ಧೀಮಂತ ಅಭಿನೇತ್ರಿ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೇ ಮಾಡಿರುವ ಇವರು 5 ಭಾಷೆಗಳಲ್ಲಿ ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ೨೦೧೦ ರಲ್ಲಿ, ಭಾರತೀಯ ವಿದ್ಯಾ ಭವನ 'ಪದ್ಮಭೂಷಣ ಬಿ. ಸರೋಜಾದೇವಿ ರಾಷ್ಟ್ರೀಯ ಪ್ರಶಸ್ತಿ', ಪ್ರತಿ ವರ್ಷ ಪ್ರದರ್ಶನ ಕಲೆಯ ಕಲಾವಿದರನ್ನು ಗೌರವಿಸುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ಥಾಪಿಸಿತು.

ಭಾರತದ ೬೦ ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತ ಸರ್ಕಾರದಿಂದ ೨೦೦೮ ರ ಜೀವಮಾನ ಸಾಧನೆ ಪ್ರಶಸ್ತಿ. ೧೯೯೨ರಲ್ಲಿ ಕೇಂದ್ರ ಸರಕಾರದ 'ಪದ್ಮಭೂಷಣ ಪ್ರಶಸ್ತಿ', ೧೯೬೯ರಲ್ಲಿ ಕೇಂದ್ರ ಸರಕಾರದ ಪದ್ಮ ಶ್ರೀ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net