ಉಪ ಲೋಕಾಯುಕ್ತರಾಗಿ ನ್ಯಾ. ಬಿ. ವೀರಪ್ಪ ನೇಮಕ

veerappa
Published on

ಬೆಂಗಳೂರು: ನೂತನ ಉಪಲೋಕಾಯುಕ್ತರನ್ನಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಿಸಿ ರಾಜ್ಯಪಾಲರಾದ ಥಾವರ್​ಚಂದ್​ ಗೆಹ್ಲೋತ್​ ಆದೇಶ ಹೊರಡಿಸಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನವರಾದ ವೀರಪ್ಪನವರು ಕರ್ನಾಟಕ ಹೈಕೋರ್ಟ್​ನ ನಿವೃತ್ತ ನ್ಯಾಯಾಧೀಶರಾಗಿದ್ದು, 2023ರ ಮೇ ತಿಂಗಳಲ್ಲಿ ಇವರು ಸೇವೆಯಿಂದ ನಿವೃತ್ತರಾಗಿದ್ದರು. ರಾಜ್ಯದಲ್ಲಿ ಉಪ ಲೋಕಾಯುಕ್ತರ ಎರಡು ಹುದ್ದೆಗಳಿವೆ. ಎರಡನೇ ಉಪ ಲೋಕಾಯುಕ್ತರ ಹುದ್ದೆಗೆ ವೀರಪ್ಪ ಅವರನ್ನು ನೇಮಿಸಿದ್ದು, ಮುಂದಿನ ಐದು ವರ್ಷಗಳ ಕಾಲ ಅವರು ಸೇವೆ ಸಲ್ಲಿಸಲಿದ್ದಾರೆ.

ಎರಡನೇ ಉಪ ಲೋಕಾಯುಕ್ತರ ಹುದ್ದೆ ಭರ್ತಿ ಕುರಿತು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಅವರೊಂದಿಗೆ ಸಮಾಲೋಚನೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವೀರಪ್ಪ ಅವರನ್ನು ನೇಮಿಸುವಂತೆ ಜೂನ್‌ 24ರಂದು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.

order Copy
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net