ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ

BY Vijayendra
Published on

ಬೆಂಗಳೂರು: ರಾಜ್ಯ ಬಿಜೆಪಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.

ರಾಜ್ಯಾಧ್ಯಕ್ಷ ಹಾಗೂ ವಿರೋಧಪಕ್ಷದ ನಾಯಕರ ನೇಮಕ ವಿಚಾರದಲ್ಲಿ ವಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಈ ಮೂಲಕ ಟೀಕೆಗೆ ಗುರಿಯಾಗುತ್ತಿದ್ದ ಒಂದು ವಿಚಾರವನ್ನು ಸಮರ್ಥವಾಗಿ ನಿಭಾಯಿಸಿದಂತಾಗಿದೆ.

ಪಕ್ಷದ ಉಪಾಧ್ಯಕ್ಷರಾಗಿ ಈಗಾಗಲೇ ಛಾಪು ಮೂಡಿಸಿ, ಪಕ್ಷದಲ್ಲಿ ಪ್ರಭಾವಿ ಎನಿಸಿಕೊಂಡಿರುವ ಬಿ.ವೈ.ವಿಜಯೇಂದ್ರ ಅವರ ಈ ನೇಮಕ ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಲವು ಕ್ಷೇತ್ರಗಳಲ್ಲಿ ವಿಜಯದ ನಗೆ ಬೀರಲು ಪೂರಕವಾಗಲಿದೆ ಎನ್ನಲಾಗುತ್ತಿದೆ.

(ಈ ಸಂಬಂಧ ಇನ್ನಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net