ನ.15 ಅಥವಾ 16ರಂದು ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ ಸಾಧ್ಯತೆ

vijayendra 1
Published on

ಬೆಂಗಳೂರು: ರಾಜ್ಯ ಬಿಜೆಪಿ ಘಟಕ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ಹಿನ್ನೆಲೆ ನ.15 ಅಥವಾ 16ರಂದು ಅಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ ಸಾಧ್ಯತೆಯಿದೆ. ನ.17ರಂದು ಶಾಸಕಾಂಗ ಸಭೆ ನಡೆಸಿ ದೆಹಲಿಗೆ ಬಿ.ವೈ ವಿಜಯೇಂದ್ರ ತೆರಳಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಶುಕ್ರವಾರ (ನ.10) ಬಿಜೆಪಿ ಹೈಕಮಾಂಡ್ ಕರ್ನಾಟಕದ ನೂತನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗರಿಗೆದರಿವೆ ಅಲ್ಲದೇ ನೂತನ ರಾಜ್ಯಾಧ್ಯಕ್ಷರು ಪದಗ್ರಹಣ ಕಾರ್ಯಕ್ರಮಕ್ಕೂ ಸಿದ್ಧತೆ ನಡೆಸಲಾಗುತ್ತಿದೆ.

ಮೂಲಗಳ ಪ್ರಕಾರ, ಬಿ.ವೈ.ವಿಜಯೇಂದ್ರ ಅವರು ನೂತನ ರಾಜ್ಯಾಧ್ಯಕ್ಷರಾಗಿ ಪದಗ್ರಹಣವನ್ನು ನವೆಂಬರ್.15 ಅಥವಾ 16ರಂದು ವಹಿಸಿಕೊಳ್ಳಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಕಾರ್ಯಕ್ರಮ ಅದ್ದೂರಿಯಾಗಿ ಆಯೋಜಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿಯ ನಾಯಕರು, ಕಾರ್ಯಕರ್ತರ ಸಮ್ಮುಖದಲ್ಲಿ ಪದಗ್ರಹಣ ಬಿವೈ ವಿಜಯೇಂದ್ರ ಮಾಡಲಿದ್ದಾರೆ.

ಅಂತೂ ಕರ್ನಾಟಕ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಆಯ್ಕೆಯಾಗಿದ್ದಾರೆ. ಹೈಕಮಾಂಡ್‌ ಸಾಕಷ್ಟು ಅಲೆದು ತೂಗಿಯೇ ಮತ್ತೆ ಲಿಂಗಾಯತ ನಾಯಕನನ್ನೆ ರಾಜ್ಯಾಧ್ಯಕ್ಷ ಮಾಡಿದ್ದು, ಬಿಎಸ್‌ ಯಡಿಯೂರಪ್ಪ ತಂದು ಕೊಟ್ಟ ವರ್ಚಸ್ಸನ್ನೆ ಅವರ ಮಗನೂ ತಂದುಕೊಡಬಹುದು ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net