

ಬೀದರ್: ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಪದಾರ್ಪಣೆ ಮಾಡಿದ್ದಾರೆ. ನಿಶ್ಚಿತವಾಗಿ ಕಾಂಗ್ರೆಸ್ ಅನ್ನು ಬುಡ ಸಮೇತ ಕಿತ್ತು ಹಾಕುವ ಕೆಲಸ ರಾಹುಲ್ ಗಾಂಧಿ ನೇತೃತ್ವದಲ್ಲೇ ಆಗುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಲೇವಡಿ ಮಾಡಿದರು.
ಬೀದರ್ ದಕ್ಷಿಣ ಕ್ಷೇತ್ರದ ಪ್ರಚಾರದ ಬಹಿರಂಗ ಸಭೆಯಲ್ಲಿ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಸದ್ಯ ಕಾಂಗ್ರೆಸ್ನವರು ಹಾರಾಡಾತ್ತಿದ್ದಾರೆ. ಅವರು ಮೇ 13ರಂದು ತಮ್ಮ ಬಾಗಿಲು ಹಾಕಿಕೊಂಡು ಗೂಡು ಸೇರಿಕೊಳ್ಳತ್ತಾರೆ ಎಂದರು.
ರಾಹುಲ್ ಗಾಂಧಿ ಕರ್ನಾಟಕಕ್ಕೆ ಪದಾರ್ಪಣೆ ಮಾಡಿದ್ದಾರೆ. ನಿಶ್ಚಿತವಾಗಿ ಕಾಂಗ್ರೆಸ್ ಬುಡ ಸಮೇತ ಕಿತ್ತು ಹಾಕುವ ಕೆಲಸ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗುತ್ತದೆ. ಕಾಂಗ್ರೆಸ್ನವರ ಗ್ಯಾರಂಟಿ ಕಾಡ್೯ಗೆ ಯಾವ ಕಿಮ್ಮತ್ತು ಇಲ್ಲ. ಗ್ಯಾರಂಟಿ ಮೂಲಕ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ನಿಮ್ಮನ್ನು ಬುಡ ಸಮೇತ ಕಿತ್ತು ಹಾಕುವ ಕೆಲಸವನ್ನು ರಾಜ್ಯದ ಪ್ರಜ್ಞಾವಂತ ಜನರು ಮಾಡುತ್ತಾರೆ ಎಂದರು.
ರಾಜ್ಯದಲ್ಲಿ ಅತಂತ್ರ ಸರ್ಕಾರ ಬಂದ್ರೆ ಸಾಕು ಎಂದು ಜೆಡಿಎಸ್ ಕಾದು ಕುಳಿತಿದೆ. ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಮಾಡಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತಾರೆ. ಯಡಿಯೂರಪ್ಪ ಪರವಾಗಿ ನಾನು ಬೆಲ್ದಾಳೆ ಪರ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್)