ಕಾಂಗ್ರೆಸ್​ಗೆ ಗುಡ್​ಬೈ ಹೇಳಿದ ಬೆನ್ನಲ್ಲೇ ಎನ್​​ಸಿಪಿ ಸೇರ್ಪಡೆಯಾದ ಬಾಬಾ ಸಿದ್ದಿಕ್​

Baba Siddique
Published on

ಮುಂಬೈ: ಗುರುವಾರವಷ್ಟೇ ಕಾಂಗ್ರೆಸ್​ ತೊರೆದಿದ್ದ ಮಾಜಿ ಸಚಿವ ಬಾಬಾ ಸಿದ್ದಿಕ್ ಅಜಿತ್​ ಪವಾರ್​ ಬಣದ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ (NCP) ಸೇರ್ಪಡೆಯಾಗಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾದ ಬಾಬಾ ಸಿದ್ದಿಕ್​ ಎನ್​ಸಿಪಿಯಲ್ಲಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ತಿಳಿಸಿದ್ದಾರೆ.

1999, 2004 ಮತ್ತು 2009 ರಲ್ಲಿ ವಂಡ್ರೆ ಪಶ್ಚಿಮ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕ್ (65), ಹಿಂದಿನ ಕಾಂಗ್ರೆಸ್-ಎನ್‌ಸಿಪಿ ನೇತೃತ್ವದ ಡೆಮಾಕ್ರಟಿಕ್ ಫ್ರಂಟ್ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಇವರ ಪುತ್ರ ಜೀಶಾನ್ ಮುಂಬೈನ ಬಾಂದ್ರಾ (ಪೂರ್ವ) ಕಾಂಗ್ರೆಸ್​ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net