ಬಾಬಾ ಸಿದ್ದಿಕಿ ಹತ್ಯೆ: ಶೂಟರ್‌ಗಳಿಗೆ ಶಸ್ತ್ರಾಸ್ತ್ರ ಒದಗಿಸಿದ ವ್ಯಕ್ತಿ ಅರೆಸ್ಟ್​ | Baba Siddique

Baba Siddique
Published on

ಮುಂಬೈ: ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರದ ಮಾಜಿ ಸಚಿವ, ಎನ್​ಸಿಪಿ ನಾಯಕ ಬಾಬಾ ಸಿದ್ದಿಕಿಯನ್ನು (Baba Siddique) ಬರ್ಬರವಾಗಿ ಹತ್ಯೆಗೈದ ಕುಖ್ಯಾತ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಗ್ಯಾಂಗ್​, ಕೊಲೆ ಮಾಡಿದ ಬೆನ್ನಲ್ಲೇ ಪೊಲೀಸರ ಕಣ್ತಪ್ಪಿಸಿ, ತಲೆಮರಿಸಿಕೊಂಡಿತ್ತು. ಆದರೆ, ಆರೋಪಿಗಳನ್ನು ಬಂಧಿಸುವಲ್ಲಿ ಇದೀಗ ಖಾಕಿ ಪಡೆ ಯಶಸ್ವಿಯಾಗಿದ್ದು, ಕೊಲೆ ಮಾಡಲು ಶೂಟರ್​ಗಳಿಗೆ ಬಂದೂಕುಗಳನ್ನು ಒದಗಿಸಿದ್ದ ವ್ಯಕ್ತಿಯನ್ನು ಅರೆಸ್ಟ್​ ಮಾಡಿದೆ.

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಮುಂಬೈ ಪೊಲೀಸರ ಅಪರಾಧ ವಿಭಾಗವು ಭಾನುವಾರ (ಅ.20) ನವಿ ಮುಂಬೈನಿಂದ ಶೂಟರ್‌ಗಳಿಗೆ ಶಸ್ತ್ರಾಸ್ತ್ರ ಒದಗಿಸಿದ ಆರೋಪದಡಿ ಇದೀಗ ಸ್ಕ್ರ್ಯಾಪ್ ಡೀಲರ್‌ನನ್ನು ಬಂಧಿಸಿದೆ. ಇಲ್ಲಿಯವರೆಗೂ ಈ ಪ್ರಕರಣದಲ್ಲಿ 10 ಮಂದಿಯನ್ನು ಅರೆಸ್ಟ್​ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು ರಾಜಸ್ಥಾನದ ಉದಯಪುರ ಮೂಲದ ಭಗವತ್ ಸಿಂಗ್ ಓಂ ಸಿಂಗ್ (32) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಆತ ಮುಂಬೈನಲ್ಲಿ ನೆಲೆಸಿದ್ದಾನೆ. ಸದ್ಯ ಸಿಂಗ್​ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಇದೇ ಅಕ್ಟೋಬರ್ 26ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net