ಹಳೇ ವೈಷಮ್ಯ; ಆರು ತಿಂಗಳ ಶಿಶು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

Rajasthan murder
Published on

ಜೈಪುರ: ಆಘಾತಕಾರಿ ಘಟನೆಯೊಂದರಲ್ಲಿ ಆರು ತಿಂಗಳ ಹೆಣ್ಣು ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿ ಅವರ ಶವಗಳನ್ನು ಮನೆಯ ಆವರಣದಲ್ಲೇ ಸುಟ್ಟು ಹಾಕಿರುವ ಘಟನೆ ರಾಜಸ್ಥಾನದ ಜೋಧಪುರದ ಓಶಿಯಾನ್​ ಎಂಬ ಪ್ರದೇಶದಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಪೊಲೀಸರು 19 ವರ್ಷದ ಯುವಕನನ್ನು ವಶಕ್ಕೆ ಪಡೆದಿದ್ದು, ಹತ್ಯೆ ಬೆಳಕಿಗೆ ಬರುತ್ತಿದ್ದಂತೆ ಆಡಳಿತರೂಢ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಎಡೆ ಮಾಡಿಕೊಟ್ಟಿದೆ.

ಹಳೇ ವೈಷಮ್ಯ

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಹಳೇ ವೈಷಮ್ಯದ ಹಿನ್ನಲೆಯಲ್ಲಿ ಕೃತ್ಯ ಎಸಗಲಾಗಿದ್ದು, ಹತ್ಯೆಯಾದವರನ್ನು ಪೂಣಾರಾಮ್​​(55), ಇವರ ಪತ್ನಿ ಭನ್ವಾರಿ(50), ಇವರ ಸೊಸೆ ಧಾಪು ಹಾಗೂ ಆರು ತಿಂಗಳ ಹೆಣ್ಣು ಮಗುವನ್ನು ಹತ್ಯೆ ಮಾಡಲಾಗಿದೆ.

Burnt alive

ಬಂಧಿತ ಆರೋಪಿ ಹಾಗೂ ಹತ್ಯೆಯಾದವರು ಸಂಬಂಧಿಕರಾಗಿದ್ದು, ಎರಡು ಕುಟುಂಬಗಳ ನಡುವೆ ಹಳೇ ವೈಷಮ್ಯವಿತ್ತು ಎಂದು ಹೇಳಲಾಗಿತ್ತು. ಈ ಸಂಬಂಧ ಆರೋಪಿಯು ಮನೆಯಲ್ಲಿದ್ದವರ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಬಳಿಕ ಮೃತದೇಹಗಳನ್ನು ಮನೆಯ ಆವರಣದಲ್ಲಿರಿಸಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.

ಬೇರೆಯವರ ಗತಿಯೇನು

ಸುಟ್ಟ ವಾಸನೆ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆ ನಡೆದ ಸ್ಥಳದ ಸುತ್ತ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ವಿಪಕ್ಷ ಬಿಜೆಪಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಈ ರೀತಿಯಾದರೆ ಬೇರೆಯವರ ಗತಿಯೇನು. ಜನತೆ ಇದನ್ನು ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್​ಗೆ ತಕ್ಕೆ ಪಾಠ ಕಲಿಸಲಿದ್ದಾರೆ ಎಂದು ಕಿಡಿಕಾರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net