ಅಂಬ್ಯುಲೆನ್ಸ್, ಟ್ರ್ಯಾಕ್ಟರ್​ಗೆ ಡಿಕ್ಕಿ; ಹೆರಿಗೆ ನೋವಿನಿಂದ ಆಸ್ಪತ್ರೆಗೆ ಹೊರಟಿದ್ದ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು

vijayapura baby
Published on

ವಿಜಯಪುರ: ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ 108 ಆಂಬ್ಯುಲೆನ್ಸ್ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್​ಗೆ   ಡಿಕ್ಕಿಯಾಗಿ ಗರ್ಭಿಣಿ, ಹೊಟ್ಟೆಯಲ್ಲಿಯೇ  ಮಗು ಸಾವನ್ನಪ್ಪಿದ್ದಾರೆ. ಈ ಘಟನೆ ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಾಗ್ಯಶ್ರೀ ರಾವುತಪ್ಪ ಪಾರಣ್ಣನವರ (19) ಮೃತ ಗರ್ಭಿಣಿ. ಗರ್ಭಿಣಿಯನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡುವಂತೆ  ತಾಳಿಕೋಟೆ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹೇಳಿದ್ದರು. ಈ ಹಿನ್ನಲೆ ಜಿಲ್ಲಾಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಆಗಮಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.

ಕಳೆದ ಒಂದೂವರೆ ವರ್ಷದ ಹಿಂದೆ ತಾಳಿಕೋಟೆ ತಾಲೂಕಿನ ನಾವದಗಿ ಗ್ರಾಮದ ಭಾಗ್ಯಶ್ರೀಗೆ, ರಾವುತಪ್ಪ ಅವರ ಜೊತೆಗೆ ವಿವಾಹವಾಗಿತ್ತು. ಮೊದಲ ಹೆರಿಗೆಗಾಗಿ ತವರು ಮನೆಗೆ ತೆರಳಿದ್ದ ಭಾಗ್ಯಶ್ರೀಗೆ ಇಂದು ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ, ತವರು ಮನೆ ನಾವದಗಿಯಿಂದ ತಾಳಿಕೋಟೆ ಸಮುದಾಯ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ನಡೆದ ಅಪಘಾತದಲ್ಲಿ ಮಹಿಳೆ ಹಾಗೂ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net