ರಾಜಕೀಯದಿಂದ ಸಹಕಾರಿ ಧೋರಣೆಗೆ ಹಿನ್ನಡೆ

tth sabhe (1)
ತೀರ್ಥಹಳ್ಳಿಯಲ್ಲಿ ರಾಜ್ಯ ಪ್ರಾಥಮಿಕ ಶಿಕ್ಷಕರ ಸೌಹಾರ್ದ ಸಹಕಾರ ಸಂಘದ ಸಭೆಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಉದ್ಘಾಟಿಸಿದರು. ಮಹೇಶ್ ಹುಲ್ಕುಳಿ, ಮಹಾಬಲೇಶ್ವರ ಹೆಗ್ಡೆ, ರಹಮತ್‌ಉಲ್ಲಾ ಅಸಾದಿ, ಗೀತಾ ರಮೇಶ್, ರಾಘವೇಂದ್ರ ಇತರರಿದ್ದರು.
Published on

ತೀರ್ಥಹಳ್ಳಿ: ಜನರ ಚಳವಳಿಯಿಂದ ಕೂಡಿರುವ ಸಹಕಾರ ಕ್ಷೇತ್ರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದರಿಂದ ಸಹಕಾರಿ ಧೋರಣೆಗೆ ಹಿನ್ನಡೆಯಾಗುವುದು ಖಚಿತ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು.

ಪಟ್ಟಣದ ಶಿಕ್ಷಕರ ಸಹಕಾರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರ ಸಂಘದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದರು.

7500 ಷೇರುದಾರರು, ರಾಜ್ಯಾದ್ಯಂತ ಶಾಖೆಗಳನ್ನು ಹೊಂದಿ ವಾರ್ಷಿಕ 800 ಕೋಟಿ ರೂ. ವ್ಯವಹಾರ ಮಾಡುತ್ತಿರುವ ಈ ಸಂಘ ರಾಜ್ಯಕ್ಕೇ ಮಾದರಿ. ಸಹಕಾರ ಸಂಸ್ಥೆಗಳು ಕೇವಲ ಹಣ ಗಳಿಕೆಗೆ ಸೀಮಿತವಾಗಿರದೆ ಜನಪರ ಕಾರ್ಯನಿರ್ವಹಿಸುತ್ತಿವೆ. ಸರ್ಕಾರದಿಂದ ಮಾಡಲಾಗದ ಕಾರ್ಯಗಳು ಸಹಕಾರ ಕ್ಷೇತ್ರದಲ್ಲಿ ನಡೆಯುತ್ತಿವೆ ಎಂದು ತಿಳಿಸಿದರು.

ಮ್ಯಾಮ್ಕೋಸ್ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ ಮಾತನಾಡಿ, ಶಿಕ್ಷಕ ಸಮುದಾಯದ ಬಲವರ್ಧನೆಗೆ ಸ್ಥಾಪನೆಯಾಗಿರುವ ಈ ಸಂಘಟನೆ ಆರ್ಥಿಕ ನೆರವಿನೊಂದಿಗೆ ಶಾಶ್ವತ ಸೂರು ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸಿರುವುದು ಪ್ರಶಂಸನೀಯ ಎಂದರು.

ಸಂಘದ ಅಧ್ಯಕ್ಷ ಮಹಾಬಲೇಶ್ವರ ಹೆಗ್ಡೆ ಮಾತನಾಡಿ, ಸೌಹಾರ್ದ ಸಂಘಗಳಲ್ಲಿ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನದಲ್ಲಿದೆ. ಅತೀ ಕಡಿಮೆ ದರದಲ್ಲಿ 2000 ಶಿಕ್ಷಕರಿಗೆ ನಿವೇಶನ ಕಲ್ಪಿಸಲಾಗಿದೆ ಎಂದರು.

ಸಭೆಯಲ್ಲಿ 100ಕ್ಕೂ ಅಧಿಕ ನಿವೃತ್ತ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪಪಂ ಅಧ್ಯಕ್ಷ ರಹಮತ್‌ಉಲ್ಲಾ ಅಸಾದಿ, ಉಪಾಧ್ಯಕ್ಷೆ ಗೀತಾ ರಮೇಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಘವೇಂದ್ರ, ವರ್ತಕರ ಸೌಹಾರ್ದ ಸಹಕಾರಿ ಅಧ್ಯಕ್ಷ ಡಾನ್ ರಾಮಣ್ಣ ಶೆಟ್ಟಿ, ಬಿಇಒ ವೈ.ಗಣೇಶ್, ಸಂಘದ ಉಪಾಧ್ಯಕ್ಷ ಎಂ.ಎಸ್.ತಿಮ್ಮಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net