

ಕೋಲಾರ: ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಈಗ ಕೆಟ್ಟ ವಾತಾವರಣ ಸೃಷ್ಟಿಯಾಗಿದ್ದು, ರಾಜ್ಯದ ಜನತೆ ರೋಸಿ ಹೋಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪ್ಟರು.
ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಜೆಪಿ&ಜೆಡಿಎಸ್ ಆಗ್ನೇಯ ಶಿಕರ ೇತ್ರದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಿಂದ ಒಂದೇ ಒಂದು ಯೋಜನೆ ಜಾರಿಗೆ ತಂದಿಲ್ಲ ಎಂದು ದೂರಿದರು.
ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಇದು ಹೊರತುಪಡಿಸಿದರೆ ಹೊಸ ಯೋಜನೆ ಬಂದಿಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಶಾಲೆ, ಕಾಲೇಜು, ಮೆಡಿಕಲ್, ಇಂಜನಿಯರ್ ಕಾಲೇಜುಗಳನ್ನು ಹೆಚ್ಚು ಪ್ರಮಾಣದಲ್ಲಿ ತೆರೆಯಲಾಯಿತು. ಆದರೆ ಈಗಿನ ಸರ್ಕಾರ ಮೂಲಸೌಲಭ್ಯ ಕಲ್ಪಿಸದೆ ಶೈಣಿಕ ವ್ಯವಸ್ಥೆಯನ್ನು ಕುಗ್ಗಿಸುತ್ತಿದೆ ಎಂದು ಕಿಡಿಕಾರಿದರು.
ಶಾಲಾ&ಕಾಲೇಜು ವ್ಯಾಪ್ತಿಯಲ್ಲಿ ಮಟ್ಕಾ ದಂಧೆ, ಮಾದಕ ವಸ್ತುಗಳ ಮಾರಾಟ ಹೆಚ್ಚಾಗಿದೆ. ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢಶಾಲಾ ಶಿಕರ ಹುದ್ದೆಗಳು ಖಾಲಿ ಇವೆ. ಆದರೆ ಸರ್ಕಾರಕ್ಕೆ ಈ ಬಗ್ಗೆ ಕಾಳಜಿ ಇಲ್ಲ. ಅಂತಹವರನ್ನೇ ಶಿಣ ಸಚಿವರನ್ನಾಗಿ ಮಾಡಿದ್ದಾರೆ. ಪ್ರಾಮಾಣಿಕವಾಗಿ ಸಂಕಷ್ಟ ಬಗೆಬಹರಿಸುವ ವಾತಾವರಣ ಯಾವುದೇ ಇಲಾಖೆಯಲ್ಲಿ ಇಲ್ಲವಾಗಿದೆ ಎಂದು ಹೇಳಿದರು.
ಚನ್ನಗಿರಿಯಲ್ಲಿ ಅಧಿಕಾರಿಯೊಬ್ಬರ ಲಾಕ್ಆಪ್ ಡೆತ್ ಆಗಿದೆ. ಅವರು ಪ್ರತಿ ತಿಂಗಳು ಇಲಾಖೆಗೆ ಹಣ ಕೊಡುತ್ತಿದ್ದರು. ಆದರೆ ಕಳೆದ ತಿಂಗಳು ಕೊಡದ ಕಾರಣ ಚಿತ್ರ ಹಿಂಸೆ ಮಾಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದರು.
ಲುವಾಗಿ ಪರಿಗಣಿಸಬೇಡಿ:
ಕಾಂಗ್ರೆಸ್ ಅಭ್ಯರ್ಥಿಯಯನ್ನು ಲುವಾಗಿ ಪರಿಗಣಿಸಬೇಡಿ. ಸರ್ಕಾರದ ಪ್ರಭಾವ ಬೀರಿ ಮತಗಳಿಸಲು ಮುಂದಾಗಿದ್ದಾರೆ. ಎರಡೂ ಪದ ಮುಖಂಡರು ಜವಾಬ್ದಾರಿಯಿಂದ ಕೆಲಸ ಮಾಡಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಕುಮಾರಸ್ವಾಮಿ ತಿಳಿಸಿದರು.
ಗ್ಯಾರಂಟಿಗಳಿಂದ ವಂಚನೆ:
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮಾತನಾಡಿ, ರಾಜ್ಯದಲ್ಲಿ ಲೂಟಿಕೋರರ ಸರ್ಕಾರ ಅಧಿಕಾರದಲ್ಲಿದೆ. ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಜನರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು. ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಖಭಂಗವಾಗುವ ರೀತಿಯಲ್ಲಿ ಫಲಿತಾಂಶ ಬರಬೇಕು ಎಂದು ತಿಳಿಸಿದರು.
ಶಾಸಕರಾದ ಜಿ.ಕೆ.ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್, ಸಂಸದ ಎಸ್.ಮುನಿಸ್ವಾಮಿ, ಜೆಡಿಎಸ್ ಮಹಿಳಾ ಟಕದ ರಾಜ್ಯಾಧ್ಯೆ ರಶ್ಮಿ ರಾಮೇಗೌಡ, ಎಂಎಲ್ಸಿಗಳಾದ ಇಂಚರ ಗೋವಿಂದರಾಜು, ಛಲವಾದಿ ನಾರಾಯಣಸ್ವಾಮಿ, ಮಾಜಿ ಸದಸ್ಯ ಆರ್.ಚೌಡರೆಡ್ಡಿ, ಬಿಜೆಪಿ ಜಿಲ್ಲಾಧ್ಯ ಡಾ.ಕೆ.ಎನ್.ವೇಣುಗೋಪಾಲ್, ಲೋಕಸಭೆ ಮೈತ್ರಿ ಅಭ್ಯರ್ಥಿ ಎಂ.ಮಲ್ಲೆಶ್ ಬಾಬು, ಮಾಜಿ ಶಾಸಕರಾದ ವರ್ತೂರು ಆರ್.ಪ್ರಕಾಶ್, ಕೆ.ಎಸ್..ಮಂಜುನಾಥ್ಗೌಡ, ವೈ.ಸಂಪಂಗಿ, ಬಿ.ಪಿ.ವೆಂಕಟಮುನಿಯಪ್ಪ, ಮುಖಂಡರಾದ ಸಿಎಂಆರ್ ಶ್ರೀನಾಥ್, ರಾಮೇಗೌಡ, ಎಂಎಲ್ಸಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಪ್ರಧಾನಕಾರ್ಯದರ್ಶಿ ಓಂಶಕ್ತಿ ಚಲಪತಿ ಇದ್ದರು.