34 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ 77 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 34 ಕೋವಿಡ್ ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ.

ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 8, ಬಾದಾಮಿ 3, ಬೀಳಗಿ 2, ಜಮಖಂಡಿ 6, ಹುನಗುಂದ 8, ಮುಧೋಳ 7 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13017 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 12601 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿರುವ 1313 ಸ್ಯಾಂಪಲ್‌ಗಳ ವರದಿ ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net