ಕೆಎಸ್​ಆರ್​ಟಿಸಿ ಬಸ್​-ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ

Accident 3 jan 20
Published on

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್​ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಮುಧೋಳ ತಾಲೂಕಿನ ಶಿರೋಳ ಗ್ರಾಮದ ಬಳಿ ಬೆಳ್ಳಂಬೆಳಗ್ಗೆ ನಡೆದಿದೆ.

ಸಿದ್ದರಾಯ ತೇಲಿ(36), ಬಾಲಪ್ಪ ಸೆಂಡಗಿ(34), ಹನುಮಂತ ಗನಗಾರ(21) ಹಾಗೂ ರಿಯಾಜ್ ಜಾಲಗೇರಿ (25) ಮೃತರು. ಇವರೆಲ್ಲರು ಗೋಟೆ ಹಾಗೂ ಖಾಜಿಬೀಳಗಿ ಮೂಲದವರು ಎಂದು ತಿಳಿದುಬಂದಿದೆ.

ಮೃತರು ಮುಧೋಳ ಮಾರ್ಗವಾಗಿ ಧಾರವಾಡಕ್ಕೆ ಹೊರಟಿದ್ದರು. ಬಸ್​ ಬೆಳಗಾವಿಯಿಂದ ಕಲಬರಗಿಗೆ ಹೊರಟಿತ್ತು. ಬಸ್​ ಚಾಲಕ ಕಬ್ಬಿನ ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಮುಧೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net