ಬಾಗಿನ ಅರ್ಪಣೆ ಕಾರ್ಯಕ್ರಮ ನಾಳೆ

Published on

ಸೋಮವಾರಪೇಟೆ: ದೊಡ್ಡಮಳ್ತೆ ಗ್ರಾಮದ ಶ್ರೀ ಸಿದ್ಧೇಶ್ವರ ಮತ್ತು ಶ್ರೀ ಬಸವೇಶ್ವರ, ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ಈ ಭಾರಿಯೂ ಶ್ರದ್ಧಾ ಭಕ್ತಿಯಿಂದ ಶ್ರೀ ಸ್ವರ್ಣಗೌರಿ ಮಹೋತ್ಸವದ ಅಂಗವಾಗಿ ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಸಲಾಗುವುದು ಎಂದು ದೇವಾಲಯ ಸಮಿತಿ ಅಧ್ಯಕ್ಷ ಎಂ.ಬಿ.ಚಂದ್ರಶೇಖರ್ ತಿಳಿಸಿದರು.

ಇತಿಹಾಸ ಪ್ರಸಿದ್ಧ ಹೊನ್ನಮ್ಮನ ಕೆರೆಗೆ ನೂರಾರು ವರ್ಷಗಳಿಂದ ಶ್ರೀ ಗೌರಿ ಹಬ್ಬದ ದಿನದಂದು ಬಾಗಿನ ಸಲ್ಲಿಸುತ್ತಾ ಬರಲಾಗುತ್ತಿದೆ. ಅದರಂತೆ ಈ ಬಾರಿ ಆ.24ರಂದು ಬೆಳಗ್ಗೆ 10.30ಕ್ಕೆ ಬಾಗಿನ ಕಟ್ಟೆಯಲ್ಲಿ ಪೂಜೆಯ ನಂತರ ಹೊನ್ನಮ್ಮನ ಕುಟುಂಬಸ್ಥರು ಮೊದಲು ಬಾಗಿನ ಸಲ್ಲಿಸುವರು. ನಂತರ ಎಲ್ಲರಿಗೂ ಬಾಗಿನ ಸಲ್ಲಿಸುವ ಅವಕಾಶ ಮಾಡಿಕೊಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇಲ್ಲಿ ಮದುವೆಯಾದ ನೂತನ ವಧು-ವರರು ಬಾಗಿನ ಸಲ್ಲಿಸುವುದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವುದು ವಿಶೇಷವಾಗಿದೆ ಎಂದರು. ಅಂದಿನ ಕಾರ್ಯಕ್ರಮಕ್ಕೆ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ , ಶಾಸಕ ಡಾ.ಮಂತರ್ ಗೌಡ, ಸಂಸದ ಯದುವೀರ್, ರಾಜ್ಯ ಒಕ್ಕಲಿಗರ ಸಮಾಜದ ಕೊಡಗು ಜಿಲ್ಲಾ ನಿರ್ದೇಶಕ ಹರಪಳ್ಳಿ ರವೀಂದ್ರ, ದಾನಿಗಳಾದ ಶೇಖರ್ ಪಾಲ್ಗೊಳ್ಳಲಿದ್ದಾರೆ. ಪೂಜೆಯ ನಂತರ ಎಲ್ಲರಿಗೂ ಊಟದ ವ್ಯವಸ್ಥೆ ಇರುತ್ತದೆ. ಹೊನ್ನಮ್ಮನ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಡಿ.ಎಂ.ಪ್ರದೀಪ್, ಪದಾಧಿಕಾರಿಗಳಾದ ಡಿ.ಎಲ್.ಅರುಣ್‌ಕುಮಾರ್, ಡಿ.ಎಸ್.ರತನ್ ಹಾಗೂ ಡಿ.ಕೆ. ಪವನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net