ಚಿನ್ನ ಕಳ್ಳಸಾಗಣೆ ಪ್ರಕರಣದ ಸ್ವಪ್ನಾಗೆ ಜಾಮೀನು; ಆದರೂ ಇಲ್ಲ ಬಿಡುಗಡೆ

Swapna Suresh
Published on

ಕೊಚ್ಚಿ: ಕೇರಳದ ಚಿನ್ನ ಕಳ್ಳಸಾಗಣೆ ಹಗರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ಗೆ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಪ್ರಧಾನ ಸೆಷನ್ಸ್ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಆದರೂ ಅವರಿಗೆ ಬಿಡುಗಡೆ ಭಾಗ್ಯವಿಲ್ಲ. ಏಕೆಂದರೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ದಾಖಲಿಸಿರುವ ಬಂಗಾರ ಕಳ್ಳಸಾಗಣೆ ಪ್ರಕರಣದಲ್ಲಿ ಸ್ವಪ್ನಾ ಜೈಲಲ್ಲೇ ಮುಂದುವರಿಯಬೇಕಾಗಿದೆ.

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣವನ್ನು ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net