

ಬಾಳೆಹೊನ್ನೂರು: ಹೋಬಳಿಯ ವಿವಿಧೆಡೆ ಸುರಿಯುತ್ತಿರುವ ಮಳೆಗೆ ಪ್ರತ್ಯೇಕ ಎರಡು ಕಡೆಗಳಲ್ಲಿ ಮರಬಿದ್ದು ವಿದ್ಯುತ್‌ಲೈನ್ ಹಾಗೂ ದನದ ಕೊಟ್ಟಿಗೆಗೆ ಹಾನಿಯಾಗಿದೆ. ಸಮೀಪದ ಬನ್ನೂರು ಗ್ರಾಮದಲ್ಲಿ ಬುಧವಾರ ಸಂಜೆ ಮಳೆ ಗಾಳಿಗೆ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ತುಂಡಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೆಣಸುಕೊಡಿಗೆ ಸಮೀಪದ ಕುಂಬತ್ತಿ ಗ್ರಾಮದ ಸುಶೀಲಮ್ಮ ಎಂಬುವರ ದನದ ಕೊಟ್ಟಿಗೆ ಮೇಲೆ ಬಿದ್ದು ಹಾನಿಯಾಗಿದೆ. ಕೊಟ್ಟಿಗೆಯಲ್ಲಿದ್ದ ಹಸುಗಳಿಗೆ ಯಾವುದೇ ತೊಂದರೆಯಾಗಿಲ್ಲ. ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಕೃಷಿ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿವೆ. ಭದ್ರಾ ನದಿಯಲ್ಲಿ ನಿಧಾನ ಗತಿಯಲ್ಲಿ ನೀರಿನ ಹರಿವು ಏರಿಕೆಯಾಗುತ್ತಿದೆ.