ಫೆ.9ರಿಂದ ಬೆಂಗಳೂರಿನಲ್ಲಿ ಶ್ರೀರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ

New Project
Published on

ಬೆಂಗಳೂರು :ಬಾಳೆಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ ಹಾಗೂ ಸಂಸ್ಕೃತಿ ಸಂವರ್ಧನ ಸಮಾರಂಭವು ಫೆ.9ರಿಂದ 11 ರವರೆಗೆ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಚಿಕ್ಕಪೇಟೆಯಲ್ಲಿರುವ ಮಹಂತರಮಠದ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಫೆ.9ರಿಂದ ಮೂರುದಿನ ಪ್ರತಿದಿನ ಬೆಳಗ್ಗೆ ಮಹಂತರಮಠದ ಸೋಮೇಶ್ವರ ದೇವಾಲಯದ ಆವರಣದಲ್ಲಿ ಜಗದ್ಗುರುಗಳ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ನೆರವೇರಲಿದೆ.

ಫೆ.9 ಮತ್ತು 10 ರಂದು ಸಂಜೆ 6.30ಕ್ಕೆ ಆನಂದರಾವ್ ವೃತ್ತದಲ್ಲಿರುವ ಶ್ರೀಜಗದ್ಗುರು ರೇಣುಕಾಚಾರ್ಯ ಕಾಲೇಜಿನ ಷರಾಪ್ ಬಸಪ್ಪ ಸಭಾಂಗಣದಲ್ಲಿ ಸಂಸ್ಕೃತಿ ಸಂವರ್ಧನಾ ಸಮಾರಂಭ ನಡೆಯಲಿದೆ.

ಫೆ.9ರಂದು ಶ್ರೀರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯುವ ಸಮಾರಂಭದ ನೇತೃತ್ವವನ್ನು ಎಡೆಯೂರಿನ ಶ್ರೀ ರೇಣುಕ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ೆ.10ರಂದು ರಾಜಾಪುರ ಮಠದ ಡಾ.ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ಶ್ರೀಮಹಂತರಮಠ ಟ್ರಸ್ಟ್ ಆಡಳಿತಾಧಿಕಾರಿ ವೀರಭದ್ರಯ್ಯನವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net