ಹೊಸ ವರ್ಷಾಚರಣೆ ಹಿನ್ನೆಲೆ ಪ್ರವಾಸಿ ತಾಣಗಳಿಗೆ ಜನರ ಪ್ರವೇಶ ನಿಷೇಧ: ತುಮಕೂರು ಜಿಲ್ಲಾಡಳಿತ ಆದೇಶ

devarayanadurga
Published on

ತುಮಕೂರು: ಹೊಸ ವರ್ಷಾಚರಣೆ ಹಿನ್ನೆಲೆ ತುಮಕೂರು ಜಿಲ್ಲಾಡಳಿತವು ಕೆಲ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ.

ದೇವರಾಯನದುರ್ಗ, ನಾಮದಚಿಲುಮೆ, ಬಸದಿಬೆಟ್ಟಕ್ಕೆ ಡಿ.31ರ ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಹೊಸ ವರ್ಷಾಚರಣೆ ಹಿನ್ನೆಲೆ, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆ ದೇವರಾಯನದುರ್ಗದಲ್ಲಿ ತಿರುವಿನ ರಸ್ತೆ ಇರುವುದರಿಂದ ಅಪಘಾತ ಸಂಭವ ಹೆಚ್ಚು. ಜನರು ಗುಂಪು ಗುಂಪಾಗಿ ಸೇರುವುದರಿಂದ ವನ್ಯಜೀವಿಗಳಿಗೂ ತೊಂದರೆಯಾಗಲಿದೆ. ಹಾಗಾಗಿ ಪ್ರವಾಸಿತಾಣಗಳ ಬಳಿ ಜಾಲಿ ರೇಡ್​ಗೆ ತುಮಕೂರು ಜಿಲ್ಲಾಡಳಿತ ಬ್ರೇಕ್ ಹಾಕಿದೆ.

ಹೊಸ ವರ್ಷಾಚರಣೆ ನೆಪದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಎಂದಿನಂತೆ ದಿನನಿತ್ಯ ಸಂಚರಿಸುವವರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net