ಬದಾಮಿ ಬನಶಂಕರಿ ರಥೋತ್ಸವಕ್ಕೆ ಚಾಲನೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ: ತಿಂಗಳು ನಡೆಯುವ ಜಾತ್ರೆ

banasankari jan 10 2020
Published on

ಬಾಗಲಕೋಟೆ: ಹೆಸರಾಂತ ಬನಶಂಕರಿ ದೇವಿ ರಥೋತ್ಸವಕ್ಕೆ ಶುಕ್ರವಾರ ವಿಧ್ಯುಕ್ತ ಚಾಲನೆ ದೊರೆಯಿತು.

ನೆರೆದಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಾಜಿ ಸಿಎಂ ಹಾಗೂ ಶಾಸಕ ಸಿದ್ದರಾಮಯ್ಯ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು.
ರಥೋತ್ಸವದ ಮೂಲಕ ಆರಂಭವಾದ ಬನಶಂಕರಿ ಜಾತ್ರೆ ತಿಂಗಳು ನಡೆಯಲಿದೆ. ರಾಜ್ಯದ ವಿವಿಧ ಕಡೆಗಳಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿ ದೇವಿ ಬನಶಂಕರಿ ಕೃಪೆಗೆ ಪಾತ್ರರಾದರು. ಒಂದು ತಿಂಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಉತ್ಸವಕ್ಕೆ ಚಾಲನೆ ನೀಡಿದ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೇವಿಯ ಗರ್ಭಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net