ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಸಂಯೋಜನೆ: ಕಾಲೇಜುಗಳಿಂದ ಅರ್ಜಿ ಆಹ್ವಾನ

BCU
Published on

ಬೆಂಗಳೂರು ಬೆಂಗಳೂರು ನಗರ ವಿಶ್ವವಿದ್ಯಾನಿಲಯವು ತನ್ನ ವ್ಯಾಪ್ತಿಯಲ್ಲಿರುವ ಸಂಯೋಜಿತ ಕಾಲೇಜುಗಳಿಂದ 2024-25ನೇ ಶೈಕ್ಷಣಿಕ ಸಾಲಿಗೆ ಸಂಯೋಜನೆ ಮುಂದುವರಿಕೆ, ಹೊಸ ಕಾಲೇಜು ಪ್ರಾರಂಭ, ಅಸ್ಥಿತ್ವದಲ್ಲಿರುವ ಕಾಲೇಜುಗಳಲ್ಲಿ ಹೊಸ ಕೋರ್ಸು/ವಿಷಯ, ಹೆಚ್ಚುವರಿ ವಿದ್ಯಾರ್ಥಿ ಪ್ರಮಾಣ, ಶಾಶ್ವತ ಸಂಯೋಜನೆಗಲಿಗೆ ಅರ್ಜಿ ಆಹ್ವಾನಿಸಿದೆ.

ರಾಜ್ಯ ಶಿಕ್ಷಣ ನೀತಿಗೆ ಪುರಕವಾಗಿ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಬೆಂಗಳೂರು ನಗರ ವಿವಿ ವೆಬ್‌ಸೈಟ್ bcu.ac.in ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ವಿವಿ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಬೆಂ.ನಗರ ವಿವಿ ಕುಲಸಚಿವರು ಪ್ರಕಟ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net