

ಬಳ್ಳಾರಿ: ಸಂಡೂರು ಉಪಚುನಾವಣೆಯಲ್ಲಿ ಹಣದ ಹೊಳೆ ಹರಿದಿದೆ, ಅಧರ್ಮ ಗೆಲುವು ಸಾಧಿಸಿದೆ ಎಂದು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಗೆಲ್ಲುವುದಾಗಿ ನಮ್ಮ ಪಕ್ಷದ ನಾಯಕರಿಗೆ ಮಾತುಕೊಟ್ಟಿದ್ದೆ. ಆದರೆ, ಆ ಮಾತು ಉಳಿಸಿಕೊಳ್ಳಲು ಆಗಲಿಲ್ಲ. ಸೋಲಿನ ಹೊಣೆ ನಾನೇ ಹೋರುತ್ತೇನೆ. ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ಮುಖ್ಯಮಂತ್ರಿ ಬಂದು ಕೆಲಸ ಮಾಡಿದ್ದಾರೆ.
ಮತದಾನ ಹಿಂದಿನ ದಿನ ಗ್ಯಾರಂಟಿ ಯೋಜನೆಯ ಹಣವನ್ನು ಜನರ ಖಾತೆಗೆ ಜಮಾ ಮಾಡಲಾಗಿದೆ. ಶಿವರಾಜ್ ತಂಗಡಗಿ ದರೋಜಿ ಭಾಗದಲ್ಲಿ ಹಣ ಹಂಚಿಕೆ ಮಾಡಿದ್ದಾರೆ. ಪ್ರಚಾರಕ್ಕೂ ಹಣ ಕೊಟ್ಟು ಜನರನ್ನು ಸೇರಿಸಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ. ಮುಸ್ಲಿಂ, ಕುರುಬ ಸಮುದಾಯದ ಮತಗಳು ಅಂಕಿ ಅಂಶಗಳ ಪ್ರಕಾರ ನಾನು ಸೋತರು ಗೆದ್ದಂತೆ. 2028ರಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಆರೋಪಿಸಿದರು.