ಬಾಂಗ್ಲಾದ ಹಿಂದೂಗಳನ್ನು ಉಳಿಸಿ.. ಸದ್ಗುರು ಮನವಿ

sadguru
Published on

ಚೆನ್ನೈ: ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಶ್ರೀ ಸದ್ಗುರು ಒತ್ತಾಯಿಸಿದರು.

ಬಾಂಗ್ಲಾದೇಶದ ಹಿಂಸಾತ್ಮಕ ಪರಿಸ್ಥಿತಿಗೆ ಸದ್ಗುರು ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದಾರೆ. ಹಿಂದೂಗಳ ಮೇಲಿನ ದೌರ್ಜನ್ಯ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ. ನಮ್ಮ ನೆರೆಹೊರೆಯಲ್ಲಿರುವ ಅಲ್ಪಸಂಖ್ಯಾತರ ಸುರಕ್ಷತೆಗೆ ಸಾಧ್ಯವಾದಷ್ಟು ಬೇಗ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಒತ್ತಾಯಿಸಿದರು.

ಬಾಂಗ್ಲಾದ ಹಿಂದೂಗಳ ಪರವಾಗಿ ನಿಲ್ಲದಿದ್ದರೆ ಭಾರತ ಎಂದಿಗೂ ಮಹಾಭಾರತವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ದುರದೃಷ್ಟವಶಾತ್ ಭಾರತದ ಭಾಗವಾಗಿದ್ದ ಪ್ರದೇಶವು ನೆರೆಯ ಪ್ರದೇಶವಾಗಿ ಮಾರ್ಪಟ್ಟಿದೆ. ಈ ದೌರ್ಜನ್ಯಗಳಿಂದ ನಮ್ಮ ಜನಾಂಗವನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಜಗ್ಗಿ ವಾಸುದೇವನ್ ಸ್ಪಷ್ಟಪಡಿಸಿದ್ದಾರೆ.

ಬಾಂಗ್ಲಾದೇಶದ 27 ಜಿಲ್ಲೆಗಳಲ್ಲಿ ಹಿಂದೂ ನಿವಾಸಗಳು ಮತ್ತು ಅವರ ವ್ಯಾಪಾರ ಸಂಸ್ಥೆಗಳ ಮೇಲೆ ದಾಳಿಗಳು ಮತ್ತು ಲೂಟಿಗಳ ವರದಿಗಳಿವೆ. ಪ್ರಧಾನಿ ರಾಜೀನಾಮೆ ಬಳಿಕವೂ ಮೀಸಲಾತಿ ಹೋರಾಟ ಆಂದೋಲನ ನಡೆಸುತ್ತಿರುವವರು ಹಿಂದೂ ದೇವಾಲಯಗಳು ಮತ್ತು ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ಕುರಿತು ಸದ್ಗುರು ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net