

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ 916 ಜನರಲ್ಲಿ ಕರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3,66,233ಕ್ಕೆ ಏರಿಕೆಯಾಗಿದೆ. 602 ಮಂದಿ ಗುಣಮುಖರಾಗಿದ್ದು, ಈವರೆಗೆ 3,43,771 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಬುಧವಾರ 11 ಮಂದಿ ಬಲಿಯಾಗಿದ್ದು, ಒಟ್ಟು ಕೋವಿಡ್ ಸಾವಿನ ಸಂಖ್ಯೆ 4,101ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಗದಿತ ಆಸ್ಪತ್ರೆ, ಆರೈಕೆ ಕೇಂದ್ರಗಳು ಹಾಗೂ ಮನೆ ನಿಗಾದಲ್ಲಿ 1,83,60 ಜನರಿದ್ದಾರೆ. 206 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.