ಬ್ಯಾಂಕ್ ನಿವೃತ್ತಿ ವೇತನದಲ್ಲಿ ತಾರತಮ್ಯ : ಕೇಂದ್ರ ಸರ್ಕಾರದ ವಿರುದ್ಧ ಫ್ರೀಡ್‌0 ಪಾರ್ಕ್‌ನಲ್ಲಿ ಪ್ರತಿಭಟನೆ.

bank (1)
Published on

ಬೆಂಗಳೂರು: ನಿವೃತ್ತಿ ವೇತನದ ತಾರಮ್ಯವನ್ನು ನಿವಾರಿಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತಿ ವೇತನದಾರರು ಮತ್ತು ನಿವೃತ್ತಿ ಸಂಸ್ಥೆಗಳ ಸಮನ್ವಯ ಸಮಿತಿಯಿಂದ ಸೋಮವಾರ ಫ್ರೀಡಂ ಪಾರ್ಕ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಯಿತು.

ಕೇಂದ್ರ ಸರ್ಕಾರ ವೇತನ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಿದ ಸಂದರ್ಭಗಳಲ್ಲಿ ಪಿಂಚಣಿದಾರರಿಗೆ ಸತತವಾಗಿ ಅನ್ಯಾಯವಾಗುತ್ತಿದೆ. ನಿವೃತ್ತರ ಪಿಂಚಣಿಯನ್ನು ಇಲ್ಲಿಯವರೆಗೆ ನವೀಕರಿಸಿಲ್ಲ. ಮೂಲ ಪಿಂಚಣಿಯನ್ನು ಆಯಾ ಬ್ಯಾಂಕ್ ನಿವೃತ್ತರು ನಿವೃತ್ತರಾದ ದಿನಾಂಕದಿಂದ ಸ್ಥಗಿತಗೊಳಿಸಲಾಗಿದೆ. ಬ್ಯಾಂಕ್ ಆಡಳಿತ ಮಂಡಳಿ ಒಕ್ಕೂಟವಾದ ಭಾರತೀಯ ಬ್ಯಾಂಕುಗಳ ಸಂಘವು, ಬ್ಯಾಂಕ್ ನಿವೃತ್ತರ ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸಲು ನಿರಾಕರಿಸುತ್ತಿದೆ. ಇಷ್ಟೆಲ್ಲ ಅನ್ಯಾಯ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ದಿವ್ಯ ಮೌನ ವಹಿಸಿರುವುದು ಬೇಸರದ ಸಂಗತಿ ಎಂದು ಸಂಘಟನೆ ರಾಷ್ಟ್ರೀಯ ಅಧ್ಯಕ್ಷ ಜಿ ಡಿ ನದ್ಾ ತಿಳಿಸಿದ್ದಾರೆ.

ಉದ್ಯೋಗಿಗಳು ಮತ್ತು ಹಿರಿಯ ನಾಗರಿಕರಿಗೆ ಕೈಗೆಟುಕುವ ಆರೋಗ್ಯ ವಿಮೆ ನೀತಿಯನ್ನು ಜಾರಿ ಮಾಡಬೇಕು. ಆರೋಗ್ಯ ವಿಮೆ ಕಂತಿಗೆ ಜಿ.ಎಸ್.ಟಿ ಹೆಚ್ಚಿಸಿರುವುದರಿಂದ ಭಾರೀ ಅನ್ಯಾವಾಗುತ್ತಿದ್ದು, ನಿವೃತ್ತರಿಗೆ ಜಿಎಸ್ಟಿ ವಿನಾಯಿತಿ ನೀಡಬೇಕು. ವೇತನ ಮತ್ತು ಗ್ರಾಚ್ಯುಟಿ ಲೆಕ್ಕಾಚಾರಕ್ಕಾಗಿ ವಿಶೇಷ ಭತ್ಯೆಯನ್ನು ಪರಿಗಣಿಸಬೇಕು. ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿ ತಿರ್ಮಾನ ಕೈಗೋಳ್ಳಬೇಕು ಎಂದು ಆಗ್ರಹಿಸಿದರು. ಎಐಬಿಪಿಆರ್‌ಸಿ ಸಲಹೆಗಾರ, ಕೆ ವಾಚಾರ್ಯ, ಜಂಟಿ ಸಂಚಾಲಕ ಸಿಬಿಪಿಆರ್‌ಒ, ಎಐಬಿಪಿಆರ್‌ಸಿ ಅಧ್ಯಕ್ಷ ಗೋಪಿನಾಥ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net