ಮಂಗಳೂರು: ಕೇಂದ್ರ ಸರ್ಕಾರ ಪ್ರಸ್ತಾವಿಸಿರುವ ಬ್ಯಾಂಕ್ ಖಾಸಗೀಕರಣ ನೀತಿ ವಿರೋಧಿಸಿ ಸಾರ್ವಜನಿಕ ರಂಗದ ಬ್ಯಾಂಕ್ ನೌಕರರ ಎರಡು ದಿನಗಳ ಮುಷ್ಕರ ಸೋಮವಾರ ಆರಂಭಗೊಂಡಿದೆ.
ಖಾಸಗಿ ಬ್ಯಾಂಕುಗಳು ಇದರಲ್ಲಿ ಭಾಗಿಯಾಗಿಲ್ಲ. ಸಾರ್ವಜನಿಕ ರಂಗದ ಬ್ಯಾಂಕ್ ಶಾಖೆಗಳು ಮುಚ್ಚಿದ್ದು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಸರ್ಕಾರಕ್ಕೆ ವ್ಯಾಪಾರ ನಡೆಸುವ ಕೆಲಸ ಇರಬಾರದು ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಬಲವಾದ ಖಂಡನೆ ವ್ಯಕ್ತವಾಯಿತು.
ಮಂಗಳೂರು ಮಿನಿ ವಿಧಾನಸೌಧದ ಮುಂಭಾಗ ಬ್ಯಾಂಕ್ ಯೂನಿಯನ್‌ಗಳ ಸಂಯುಕ್ತ ವೇದಿಕೆಯ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
.