

ಹಾವೇರಿ: ಪಿ.ಎಂ. ಸ್ವನಿಧಿ, ಎಂ.ಪಿ. ಕಿಸಾನ್, ಮುದ್ರಾ ಸೇರಿದಂತೆ ವಿವಿಧ ಯೋಜನೆಗಳು ಬಡವರ ಯೋಜನೆಗಳಾಗಿದ್ದು, ಈ ಯೋಜನೆಗಳು ಅವರಿಗೆ ತಲುಪುವಂತೆ ಅಧಿಕಾರಿಗಳು ಹಾಗೂ ಬ್ಯಾಂಕರ್ಸ್ಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಾರ್ಚ್ ಅಂತ್ಯದೊಳಗೆ ಗುರಿಸಾಧನೆ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಇಲ್ಲಿಯ ಜಿಪಂ ಸಭಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲೆಯ ಬ್ಯಾಂಕ್ಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಆಥಿರ್ಕವಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಮಹಿಳೆಯರು ಹಾಗೂ ಇತರ ವಲಯಕ್ಕೂ ಗರಿಷ್ಠ ಸಾಲ ನೀಡಬೇಕು ಎಂದರು.
ಯೋಜನೆಗಳ ಅರಿವು ಮೂಡಿಸಿ...
ಪಿ.ಎಂ. ಸ್ವನಿಧಿ, ಎಂ.ಪಿ. ಕಿಸಾನ್, ವಿಶ್ವಕರ್ಮ, ಮುದ್ರಾ ಸೇರಿದಂತೆ ವಿವಿಧ ಯೋಜನೆಗಳ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಈ ಯೋಜನೆಗಳ ವ್ಯಾಪ್ತಿಗೆ ಬರುವ ಫಲಾನುಭವಿಗಳ ಸರ್ವೇ ಮಾಡಿ, ಯಾವ ಯೋಜನೆಗಳಿಗೆ ವರ್ಗವಾರು ಎಷ್ಟು ಸಾಲ, ಸಹಾಯಧನ ಸಿಗುತ್ತದೆ. ಅದಕ್ಕೆ ಬೇಕಾದ ದಾಖಲೆಗಳ ಮಾಹಿತಿ ನೀಡಬೇಕು. ಅಧಿಕಾರಿಗಳು ಕಾಳಜಿಯಿಂದ ಮಾಡಿದರೆ ಬಡವರ ಅಭಿವೃದ್ಧಿಯಾಗುತ್ತದೆ ಎಂದರು.
ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಫಲಾನುಭವಿಗಳ ಅಜಿರ್ಯನ್ನು ಬ್ಯಾಂಕ್ಗಳಿಗೆ ಕಳುಹಿಸಿ ಕುಳಿತರೆ ಅಧಿಕಾರಿಗಳ ಕೆಲಸ ಮುಗಿಯಲ್ಲ, ಸಾಲ ಮಂಜೂರು ಆಗುವರೆಗೆ ಅದನ್ನು ಫಾಲೋ ಮಾಡಬೇಕು. ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕು ಎಂದರು.
ಬ್ಯಾಂಕ್ ಶಾಖೆ ಆರಂಭಿಸಿ...
ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕ್ಗಳ ಅವಶ್ಯಕತೆ ಇದ್ದು, ಯಾವುದೇ ಕಾರಣ ಹೇಳದೆ ಶಿಗ್ಗಾಂವಿ ತಾಲೂಕು ಚಂದಾಪುರ ಹಾಗೂ ಹಾವೇರಿ ತಾಲೂಕ ಹೊಸರಿತ್ತಿಯಲ್ಲಿ ಡಿಸೆಂಬರ್ ಅಂತ್ಯದೊಳಗೆ ಬ್ಯಾಂಕ್ ಶಾಖೆ ಆರಂಭಿಸಬೇಕು. ಕರ್ನಾಟಕ ಬ್ಯಾಂಕ್ನವರ ರೆಸೊ ಹೆಚ್ಚಾಗಬೇಕು. ಉತ್ತರ ಕರ್ನಾಟಕದವರಿಂದ ಠೇವಣಿ ಪಡೆದ ಹಣ ದಕ್ಷಿಣ ಕನ್ನಡ ಹಾಗೂ ಇತರೆಡೆ ಸಾಲ ನೀಡುತ್ತಿದ್ದಾರೆ. ಈ ಭಾಗದ ಜನರಿಗೆ ಸಾಲ ಸೌಲಭ್ಯ ದೊರೆಯಲಿ. ಮುಂದಿನ ಸಭೆಗೆ ಹಾಜರಾಗುವಂತೆ ಕರ್ನಾಟಕ ಬ್ಯಾಂಕ್ ಎಂ.ಡಿ.ಗೆ ನೋಟೀಸ್ ನೀಡುವಂತೆ ಜಿ.ಪಂ. ಉಪ ಕಾರ್ಯದಶಿರ್ಗಳಿಗೆ ನಿರ್ದೇಶನ ನೀಡಿದರು.
ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಭದೇವ, ಜಿಪಂ ಉಪ ಕಾರ್ಯದಶಿರ್ ಪುನಿತ್, ಬ್ಯಾಂಕ್ ಅಧಿಕಾರಿಗಳಾದ ಸೂರಜ್ ಎನ್., ನಬಾರ್ಡ್ನ ರಂಗನಾಥ ಹಾಗೂ ಇತರ ಬ್ಯಾಂಕ್ಗಳ ಪ್ರಾದೇಶಿಕ ಅಧಿಕಾರಿಗಳು ಉಪಸ್ಥಿತರಿದ್ದರು.