

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ, ನಂತರದ ಗಲಭೆಗೆ ನಿಷೇಧಿತ ಕೆಎ್ಡಿ, ಪಿಎ್ಐ ಸಂಘಟನೆಗಳ ನಂಟಿರಬಹುದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಂಶಯ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲ ತಾಣದ ತಮ್ಮ ಖಾತೆಯಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿರುವ ಅವರು,
ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ದುಷ್ಕೃತ್ಯ ರೀತಿ ಗಮನಿಸಿ ಜನರು ಸಂದೇಹ ವ್ಯಕ್ತಪಡಿಸುತ್ತಿದ್ದಾರೆ.
ದುರುಳರು ಗಲಭೆಗೊ ಮುನ್ನ 150 ಮಾಸ್ಕ್ ಖರೀದಿಸಿದ್ದಾರೆ. ಸಿಸಿಟಿವಿಗಳನ್ನು ನಾಶ ಮಾಡಿದ್ದಾರೆ. ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ ಎಂದಿದ್ದಾರೆ.
ಅಷ್ಟೇ ಅಲ್ಲದೆ ದಾಖಲಿಸಿರುವ ದಾವೆಯಲ್ಲಿ ಮೊದಲ 23 ಆರೋಪಿಗಳು ಹಿಂದುಗಳು ಆಗಿರುವ ಕಾರಣ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ.
ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣ ಬೇಧಿಸುವುದು ಕಷ್ಟಸಾಧ್ಯವಾಗಿದೆ.
ಪ್ರಕರಣದ ಗಂಭೀರತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅರಿತು ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು ಎಂದು ಆರ್.ಅಶೋಕ್ ಆಗ್ರಹಿಸಿದ್ದಾರೆ.