ಬಂಟ್ವಾಳ ಪಂಜಿಕಲ್ಲು ಮನೆ ಮೇಲೆ ಗುಡ್ಡ ಕುಸಿತ ಮೃತರ ಸಂಖ್ಯೆ ಮೂರಕ್ಕೆ ಏರಿಕೆ

IMG-20220707-WA0002
Published on

ಮಂಗಳೂರು: ಬಂಟ್ವಾಳ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಬುಧವಾರ ರಾತ್ರಿ ಮನೆ ಮೇಲೆ ಗುಡ್ಡ ಕುಸಿದ ಪರಿಣಾಮ ಅದರಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.

ಪಾಲಕ್ಕಾಡ್ ನ ಬಿಜು ಎಂಬವರು ಘಟನೆ ಸಂದರ್ಭದಲ್ಲಿ ಮೃತಪಟ್ಟಿದ್ದರು. ಉಳಿದ ಮೂವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂತೋಷ್ ಮತ್ತು ಬಾಬು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಾನಿ ಎಂಬವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಕೇರಳದ ನಿವಾಸಿಗಳಾಗಿದ್ದು ರಬ್ಬರ್ ಟ್ಯಾಪಿಂಗ್ ಮಾಡಲು ಬಂದಿದ್ದರು. ಇವರು ವಾಸವಾಗಿದ್ದ ಮನೆ ಮೇಲೆ ಗುಡ್ಡ ಜರಿದು ಬಿದ್ದಿತ್ತು. ಗುಡ್ಡ ಮತ್ತೆ ಕುಸಿಯುವ ಭೀತಿ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net