ಬಂಟ್ವಾಳದಲ್ಲಿ ಬಾಲಕಿಯ ಗ್ಯಾಂಗ್​ರೇಪ್​: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

araga
Published on

ಬಂಟ್ವಾಳ/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿರುವ ಶಾಲಾ ವಿದ್ಯಾರ್ಥಿನಿಯ ಗ್ಯಾಂಗ್​ ರೇಪ್​ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ತನಿಖೆ ವೇಗವಾಗಿ ಸಾಗುತ್ತಿದೆ, ಬಿಗಿಯಾದ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ವ್ಯಾಪ್ತಿಯಲ್ಲಿ ನಿನ್ನೆ ಬೆಳಿಗ್ಗೆ 7 ಗಂಟೆ ವೇಳೆಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 16 ವರ್ಷದ ಬಾಲಕಿಯನ್ನು ಐವರು ಕಾಮುಕರು ಕಾರಿನಲ್ಲಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ವಿಚಾರ ಇಂದು ಬೆಳಕಿಗೆ ಬಂದಿತ್ತು. ಈ ಕೃತ್ಯದ ಬಗ್ಗೆ ಬಾಲಕಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವ ಬಂಟ್ವಾಳ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.

ಪ್ರಕರಣದ ಬಗ್ಗೆ ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಗ್ಯಾಂಗ್ ರೇಪ್ ಆಗಿದೆ ಅಂತ ಕೇಸು ದಾಖಲಾಗಿದೆ. ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪೊಲೀಸರ ತನಿಖೆ ವೇಗವಾಗಿ ಹೋಗುತ್ತಿದೆ. ಬಿಗಿಯಾದ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಅತ್ಯಾಚಾರದಂಥ ಕೃತ್ಯಗಳನ್ನು ಸಹಿಸೋದಿಲ್ಲ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net