ಮದ್ಯಪ್ರಿಯರ ಗಮನಕ್ಕೆ.. ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಈ ಮೂರು ದಿನ ಮದ್ಯ ಮಾರಾಟ ಬಂದ್​

Liqor Sale
Published on

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧವಾಗಲಿದೆ.

ಮೇ 10 ರಂದು ಮತದಾನ ನಡೆಯಲಿದ್ದು, ಮೇ 8ರ ಮಧ್ಯರಾತ್ರಿಯಿಂದ ಮೇ 10ರ ಮಧ್ಯರಾತ್ರಿಯವರೆಗೂ ಮದ್ಯ ಮಾರುವಂತಿಲ್ಲ. ಒಂದು ದಿನ ಮುಂಚಿತವಾಗಿಯೇ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್​ ಆಗಲಿದೆ. ಮೇ 13ರಂದು ಫಲಿತಾಂಶ ಹೊರಬೀಳುವ ಕಾರಣ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೂ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ.

ಚುನಾವಣೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ. ಮದ್ಯ ಮಾರಾಟಕ್ಕೂ ಮುನ್ನ ಭಾರೀ ಪ್ರಮಾಣದ ಮದ್ಯವನ್ನು ಖರೀದಿ ಮಾಡಿ ಸಂಗ್ರಹಿಸಿ ಇಟ್ಟುಕೊಳ್ಳುವವರ ಮೇಲೆಯೂ ಪೊಲೀಸರು ಕಣ್ಣಿಟ್ಟಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net