ಅಸ್ವಸ್ಥರಾಗಿ ಕುಸಿದು ಬಿದ್ದ ಬರಗೂರು ರಾಮಚಂದ್ರಪ್ಪ; ಪ್ರಾಥಮಿಕ ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಬಂಡಾಯ ಸಾಹಿತಿ

Baraguru
Published on

ದಾವಣಗೆರೆ: ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸಮಾರಂಭವೊಂದರಲ್ಲಿ ಭಾಗಿಯಾಗಿ ಮರಳುತ್ತಿದ್ದಾಗ ಅಸ್ವಸ್ಥರಾಗಿ ಕುಸಿದು ಬಿದ್ದ ಪ್ರಕರಣ ನಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರು ಚೇತರಿಸಿಕೊಂಡಿದ್ದಾರೆ.

ಹರಿಹರದ ಗುರು ಭವನದಲ್ಲಿ ಭಾನುವಾರ ನಡೆದ ಆಧುನಿಕ ಕನ್ನಡ ಸಾಹಿತ್ಯ ಸಂವೇದನೆಯ ಬಹುರೂಪಿಗಳು ವಿಷಯದ ಕುರಿತು ವಿಚಾರ ಸಂಕಿರಣದಲ್ಲಿ ಭಾಗಿಯಾಗಿದ್ದ ಬರಗೂರು, ಕಾರ್ಯಕ್ರಮ ಮುಗಿಸಿಕೊಂಡು ಹೊರ ಬಂದಾಗ ಕುಸಿದು ಬಿದ್ದರು. ತಕ್ಷಣ ಅವರನ್ನು ಹರಿಹರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ನಂತರ ಚೇತರಿಸಿಕೊಂಡ ಅವರು ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು.

ವಿಜಯವಾಣಿಯೊಂದಿಗೆ ಮಾತನಾಡಿದ ಬರಗೂರು ರಾಮಚಂದ್ರಪ್ಪ, ಇತ್ತೀಚೆಗೆ ಸುತ್ತಾಟ ಜಾಸ್ತಿ ಆಗಿದ್ದರಿಂದ ಹೀಗೆ ಆಗಿರಬಹುದು. ವೈದ್ಯರು ಎಲ್ಲ ತಪಾಸಣೆ ಮಾಡಿದ್ದು ಯಾವುದೇ ಸಮಸ್ಯೆ ಕಂಡುಬಂದಿಲ್ಲ ಎಂದು ಹೇಳಿದ್ದಾರೆ ಎಂಬುದಾಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net