ಬೆಂಕಿ ಕೆನ್ನಾಲಿಗೆಗೆ ಹೊತ್ತಿ ಉರಿದ ಕೊಟ್ಟಿಗೆ; 9 ಜಾನುವಾರು, 20 ಮೇಕೆ, ಕುರಿ ಸಾವು..

fire
Published on

ತುಮಕೂರು:  ಜಾನುವಾರುಗಳಿದ್ದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ 9 ಹಸುಗಳು, 20 ಮೇಕೆಗಳು ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಕಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಹಸುಗಳು, ಮೇಕೆಗಳು  ಜೀವಂತವಾಗಿ ಸುಟ್ಟು ಹೋಗಿವೆ. ಒಂದು ಟ್ರ್ಯಾಕ್ಟರ್​, ಅಡಕೆ, ಕೃಷಿ ಉಪಕರಣಗಳು ಬೆಂಕಿಗಾಹುತಿಯಾಗಿವೆ.

ನಾಲ್ಕೈದು ಜಾನುವಾರುಗಳ ರಕ್ಷಣೆ ಮಾಡಲಾಗಿದೆ. ಕಾರನಹಳ್ಳಿ ನಿವಾಸಿ ಚಿಕ್ಕಣ್ಣಗೆ ಸೇರಿದ ದನದ ಕೊಟ್ಟಿಗೆ ಬೆಂಕಿ ಬಿದ್ದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net