

ಬೆಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬೆಂಬಲಿಸಿ ಟ್ವೀಟ್ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯ ಸರ್ಕಾರದ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.
ಟ್ವೀಟ್ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳ್, "ಮಂಗಳೂರಿನ ಬಜರಂಗದಳದ ಕಾರ್ಯಕರ್ತರನ್ನು ಗಡಿಪಾರು ಮಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಕುಗ್ಗಿಸುವ ವ್ಯರ್ಥಪ್ರಯತ್ನ ಮಾಡುತ್ತಿದೆ. ಬಜರಂಗದಳ ಹುಟ್ಟಿದ್ದೇ ಸಂಘರ್ಷಕ್ಕಾಗಿ, ಬಜರಂಗದಳದ ಉದ್ದೇಶ ಸೇವಾ, ಸುರಕ್ಷಾ ಹಾಗು ಸಂಸ್ಕಾರ" ಎಂದು ಟ್ವೀಟ್ ಮಾಡಿದ್ದಾರೆ.
"ಹಿಂದೂ ಸಂಘಟನೆ ಕಾರ್ಯಕರ್ತರು ಎದೆಗುಂದಬೇಡಿ, ನಿಮ್ಮ ಜೊತೆ ನಾವಿದ್ದೇವೆ" ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ.