ಬಸವಣ್ಣ ದೇವರ ದೇವಸ್ಥಾನದ ಕಳಸಾರೋಹಣ ಮೇ 9ರಂದು

je721538035802367-abc
Published on

ಹಾನಗಲ್ಲ: ತಾಲೂಕಿನ ಮಾಸನಕಟ್ಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದ ಸೇವಾ ಸಮಿತಿ ವತಿಯಿಂದ ಬಸವಣ್ಣ ದೇವರ ದೇವಸ್ಥಾನದ ನೂತನ ಕಟ್ಟಡ ಲೋಕಾರ್ಪಣೆ, ಬಸವಣ್ಣ ದೇವರ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭ ಮೇ 9ರಂದು ಬೆಳ್ಗೆ 11.30ಕ್ಕೆ ಜರುಗಲಿದೆ.

ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ದೇಶ್ವರ ಸ್ವಾಮೀಜಿ ನೇತೃತ್ವ ವಹಿಸುವರು. ಕೂಡಲ ಗುರುನಂಜೇಶ್ವರ ಮಠದ ಗುರುಮಹೇಶ್ವರ ಸ್ವಾಮೀಜಿ, ಮಂತ್ರೋಡಿ ಮಠದ ಸಿದ್ದರಾಮೇಶ್ವರ ಸ್ವಾಮೀಜಿ, ಅಕ್ಕಿಆಲೂರ ಮುತ್ತಿನಕಂತಿಮಠದ ಚಂದ್ರಶೇಖರ ಸ್ವಾಮೀಜಿ, ಗಂಜಿಗಟ್ಟಿ ಚಿರಮುರ್ತೇಶ್ವರ ಮಠದ ಶಿವಲಿಂಗ ಸ್ವಾಮೀಜಿ, ಹೋತನಹಳ್ಳಿ ಸಿಂದಗಿಮಠದ ಶಂಭುಲಿಂಗ ಸ್ವಾಮೀಜಿ, ಹೇರೂರಿನ ಗುಬ್ಬಿ ಅಜ್ಜಯ್ಯನವರ ಮಠದ ಡಾ. ನಂಜುಂಡ ಪಂಡಿತಾರಾಧ್ಯ ಸ್ವಾಮೀಜಿ ನೇತೃತ್ವ ವಹಿಸುವರು.

ಸಂಸದ ಬಸವರಾಜ ಬೊಮ್ಮಾಯಿ ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಜ್ಯೋತಿ ಬೆಳಗಿಸುವರು. ದೇವಸ್ಥಾನದ ಕಮಿಟಿ ಅಧ್ಯಕ್ಷ ಚನಬಸನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು. ಶಾಸಕ ಶ್ರೀನಿವಾಸ ಮಾನೆ, ಮಾಜಿ ಶಾಸಕ ಶಿವರಾಜ ಸಜ್ಜನರ, ಜಿಪಂ ಮಾಜಿ ಸದಸ್ಯ ಎಂ.ಆರ್​. ಪಾಟೀಲ, ಮಾಲತೇಶ ಸೊಪ್ಪಿನ ಮತ್ತಿತರರು ಪಾಲ್ಗೊಳ್ಳುವರು ಎಂದು ದೇವಸ್ಥಾನ ಸಮಿತಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net