ಕಾವೇರಿ ವಿಚಾರ; ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ: ಬಸವರಾಜ ಬೊಮ್ಮಾಯಿ

Untitled design - 2023-08-31T135515.404
Published on

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಿದ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ, ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ ಎಂದು ಹೇಳಿದ್ದಾರೆ.

"ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್​ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ. ಆದ್ರೂ ಅದರ ವಿರುದ್ದ ಯಾವುದೇ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ" ಎಂದು ಆರೋಪಿಸಿದರು.

"ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯುಸೆಕ್ಸ್ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್​ ಅವರು ಕಾನೂನು ತಜ್ಞರೊಟ್ಟಿಗೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥವಿದೆ. ಹಿಂದಿನ ಆದೇಶದ ವಿರುದ್ದ ಈಗಾಗಲೇ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು, ಅದು ಕೂಡ ಮಾಡಿಲ್ಲ" ಎಂದು ಹೇಳಿದರು.

"ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಯಾವುದೇ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ‌ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ" ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net