ಸಾರಿಗೆ ನೌಕರರು ಸಂಬಳವಿಲ್ಲದೆ ದುಡಿಯುವಂತದ್ದು, ಕೆಟ್ಟ ಬಸ್​ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ: ಬಸವರಾಜ ಬೊಮ್ಮಾಯಿ

Untitled design - 2023-08-02T134737.106
Published on

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್​ ಮೂಲಕ ಲೇವಡಿ ಮಾಡಿರುವ ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ, ಸಾರಿಗೆ ಬಸ್​ಗಳು ಕೆಟ್ಟು ನಿಲ್ಲುವುದು, ಸಾರಿಗೆ ನೌಕರರು ಪರದಾಡುವಂತ ಪರಿಸ್ಥಿತಿಗಳು ದೂರವಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, "ಶಕ್ತಿ ಯೋಜನೆ ಫಲಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ. ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ" ಎಂದು ಟ್ವೀಟ್​ ಮಾಡಿದ್ದಾರೆ.

"ಮುಂಬರುವ ದಿನಗಳಲ್ಲಿ ಸಾರಿಗೆ ನಿಗಮಗಳು ಬಸ್​​ಗಳನ್ನು ಡೀಸೆಲ್ ಇಲ್ಲದೆ ನಿಲ್ಲಿಸುವಂತದ್ದು, ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತದ್ದು, ಕೆಟ್ಟ ಬಸ್​​ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ" ಎಂದು ಟ್ವೀಟ್​ ಮುಖೇನ ರಾಜ್ಯ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net