

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂವರನ್ನು ಉಪಮುಖ್ಯಮಂತ್ರಿಗಳಾಗಿ ಆಯ್ಕೆ ಮಾಡಲಾಗಿದೆ.
ಶ್ರೀರಾಮುಲು, ಗೋವಿಂದ ಕಾರಜೋಳ ಹಾಗೂ ಆರ್.ಅಶೋಕ್ ಅವರನ್ನು ಉಪಮುಖ್ಯಮಂತ್ರಿಗಳಾಗಿ ಘೋಷಿಸಲಾಗಿದೆ. ಅಶ್ವಥ್ ನಾರಾಯಣ್ ಮತ್ತು ಲಕ್ಷ್ಮಣ್ ಸವದಿಯನ್ನು ಸ್ಥಾನದಿಂದ ಕೈ ಬಿಡಲಾಗಿದೆ. ಉಪ ಮುಖ್ಯಮಂತ್ರಿ ವಿಚಾರದಲ್ಲಿ ಒಕ್ಕಲಿಗ, ವಾಲ್ಮೀಕಿ ಹಾಗೂ ದಲಿತ ಸಮುದಾಯಕ್ಕೆ ಆದ್ಯತೆ ನೀಡಲಾಗಿದೆ.
ಆರ್.ಅಶೋಕ್ ಹಾಗೂ ಶ್ರೀರಾಮುಲು ಅವರು ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದು, ಇದೀಗ ಅವರನ್ನು ಡಿಸಿಎಂಗಳಾಗಿ ಆಯ್ಕೆ ಮಾಡಲಾಗಿದೆ. ಬಿಎಸ್ವೈ ಸಂಪುಟದಲ್ಲಿ ಡಿಸಿಎಂ ಆಗಿದ್ದ ಗೋವಿಂದ ಕಾರಜೋಳ ತಮ್ಮ ಸ್ಥಾನವನ್ನು ಉಳಿಸಿಕೊಂಡು ಅಧಿಕಾರ ಮುನ್ನೆಡಸಲಿದ್ದಾರೆ ಎಂದು ತಿಳಿಸಲಾಗಿದೆ.