ನನ್ನ ಮೇಲೆ‌ ಮಾಡಿರುವ ಭ್ರಷ್ಟಾಚಾರ ಆರೋಪವನ್ನು ಸಿದ್ದರಾಮಯ್ಯ ಸಾಬೀತು ಮಾಡಲಿ; ಸವಾಲೆಸೆದ ಸಿಎಂ ಬೊಮ್ಮಾಯಿ

Siddaramaiah
Published on

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ. ಜನರ ಉತ್ಸಾಹ ನೋಡಿದರೆ ರಾಜ್ಯದ ತುಂಬಾ ಬಿಜೆಪಿ ಅಲೆ ಇರುವುದಕ್ಕೆ ಸಾಕ್ಷಿಯಾಗಿದೆ. ರಾಜ್ಯಕ್ಕೆ ಬಂದಿರುವ ಅಮಿತ್ ಷಾ ಚುನಾವಣೆಯ ದೃಷ್ಟಿಯಿಂದ ಕೆಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿದ್ದೇನೆ

ಲಿಂಗಾಯತ ಮುಖ್ಯಮಂತ್ರಿಗಳೆಲ್ಲ ಭ್ರಷ್ಟರು ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿದ್ದೇನೆ, ಆರೋಪ ಮಾಡಿ, ಅದನ್ನು ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ ಎಂದು ಸಿಎಂ ಬೊಮ್ಮಾಯಿ ಕಿಡಿಕಾರಿದರು.

ಸಿದ್ದರಾಮಯ್ಯ ಆರೋಪ ಹಾಸ್ಯಾಸ್ಪದ

ಸಿದ್ದರಾಮಯ್ಯ ಅವರ ಮೇಲೆ ಸಾಕಷ್ಟು ಪ್ರಕರಣಗಳಿದ್ದು, ಲೋಖಾಯುಕ್ತ ತನಿಖೆ ನಡೆಸುತ್ತಿದೆ. ನನ್ನ ಮೇಲೆ‌ ಮಾಡಿರುವ ಆರೋಪದ ಕುರಿತು ಸಿದ್ಧರಾಮಯ್ಯ ಸಾಬೀತು ಮಾಡಲಿ. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದರೆ ಕಾಂಗ್ರೆಸ್. ಭ್ರಷ್ಟಾಚಾರದ ಅವಿಭಾಜ್ಯ ಅಂಗ ಕಾಂಗ್ರೆಸ್. ಹೀಗಿರುವಾಗ ಸಿದ್ದರಾಮಯ್ಯ ಅವರ ಆರೋಪ ಹಾಸ್ಯಾಸ್ಪದವಾಗಿ ಕಾಣಿಸುತ್ತದೆ. ಅವರ ಎಷ್ಟು ಜನ ನಾಯಕರು ಜೈಲಿಗೆ ಹೋಗಿದ್ದಾರೆ, ಬೇಲ್​​ನಲ್ಲಿ ಬಂದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net