ಮುಂದಿನ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಬಸವರಾಜ ಹೊರಟ್ಟಿ

Basavaraj Horatti
Published on

ಹುಬ್ಬಳ್ಳಿ: ಮುಂಬರುವ ವಿಧಾನ‌ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಎಲ್ಲ ಮುಖಂಡರೊಂದಿಗೆ ಮಾತುಕತೆ ನಡೆದಿದೆ.

ಮಾಜಿ ಮುಖ್ಯಮಂತ್ರಿಗಳಾದ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಹಾಗೂ ಜೆಡಿಎಸ್ ಮುಖಂಡ ಎಚ್​.ಡಿ. ಕುಮಾರಸ್ವಾಮಿ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು. ಚುನಾವಣೆ ಘೋಷಣೆಯಾದ ಕೂಡಲೇ ಬಿಜೆಪಿಗೆ ಸೇರ್ಪಡೆ ಆಗುವುದು ನಿರ್ಧಾರವಾಗಲಿದೆ ಎಂದೂ ಅವರು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net