

ಹಾವೇರಿ: ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಮೇ 10ರಂದು ಬೆಳಗ್ಗೆ 9 ಗಂಟೆಗೆ ನಗರದ ಹೊಸಮಠದ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಮಾಲಾರ್ಪಣೆ ಮಾಡಲಿದ್ದಾರೆ. 10-30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಗುತ್ತಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.