

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಏ. 19ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಬಸವೇಶ್ವರ ಜಯಂತಿಯ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಭಾಗವಹಿಸಿ ಸಲಹೆ, ಸೂಚನೆ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.